ಬಾಲಕಿಗೆ ಲೈಂಗಿಕ ದೌರ್ಜನ್ಯ-ನ್ಯಾಯಾಲಯದ ತೀರ್ಪು: ನೆಲ್ಯಾಡಿಯ ರವಿಗೆ 20 ವರ್ಷ ಕಠಿಣ ಕಾರಾಗೃಹ

ಬಾಲಕಿಗೆ ಲೈಂಗಿಕ ದೌರ್ಜನ್ಯ-ನ್ಯಾಯಾಲಯದ ತೀರ್ಪು: ನೆಲ್ಯಾಡಿಯ ರವಿಗೆ 20 ವರ್ಷ ಕಠಿಣ ಕಾರಾಗೃಹ

ಕಡಬ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ನೆಲ್ಯಾಡಿಯ ರವಿ ಯಾನೇ ರವೀಂದ್ರ ಆಚಾರ್ಯ ತಪ್ಪಿತಸ್ತ ಎಂದು ಪರಿಗಣಿಸಿ ಪುತ್ತೂರು 7ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಳಾ ಚಕಲಬ್ಬಿ ಅವರು  ಆತನಿಗೆ 20 ವರ್ಷ ಕಠಿಣ ಕಾರಾಗೃಹವಾಸದ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. 

ಸಂತ್ರಸ್ತೆಗೆ 9 ಲಕ್ಷ ಪರಿಹಾರ ನೀಡುವಂತೆ ಕಾನೂನುಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ. ನ್ಯಾಯಾಲಯ ಈ ಪ್ರಕರಣದಲ್ಲಿ 25 ಸಾಕ್ಷಿಗಳ ವಿಚಾರಣೆ ನಡೆಸಿತ್ತು. 2018 ಅಕ್ಟೋಬರ್ 13ರಂದು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಜಾಲುಮನೆ ರವೀಂದ್ರ ಆಚಾರ್ಯ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಕಡಬ ಠಾಣೆಯಲ್ಲಿ ದಾಖಲಾಗಿತ್ತು. ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್ ಕೆ. ಮತ್ತು ಕಡಬ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ ತನಿಖೆ ನಡೆಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article