ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

ಕಾಸರಗೋಡು: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ತೋರೋತ್ ನಿವಾಸಿ ಹರಿಶ್ರೀ (40) ಎಂದು ಗುರುತಿಸಲಾಗಿದೆ. ಅವರು ಕಣ್ಣೂರು ಜಿಲ್ಲೆಯ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಜುಲೈ 21ರಂದು ಹರಿಶ್ರೀ ಅವರು ಮನೆಯ ಸ್ನಾನಗೃಹದಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದರು. ತೀವ್ರ ಸುಟ್ಟ ಗಾಯಗಳಿಂದ ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಅಲ್ಲಿ ಹಲವು ದಿನಗಳ ಕಾಲ ಚಿಕಿತ್ಸೆ ನೀಡಿದ ಬಳಿಕ ಕಣ್ಣೂರಿನ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article