ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
Saturday, October 24, 2026
ಕಾಸರಗೋಡು: ಲೈಂಗಿಕ ದೌರ್ಜನ್ಯಕ್ಕೊಳಗಾಗಿ 17ರ ಹರೆಯದ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿ 18 ವರ್ಷದ ಯುವಕನ ವಿರುದ್ಧ ಕುಂಬಳೆ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎರಡು ತಿಂಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿರಲಿಲ್ಲ. ಆದರೆ ಎರಡು ದಿನದ ಹಿಂದೆ ಪೊಲೀಸರಿಗೆ ಲಭಿಸಿದ ರಹಸ್ಯ ಮಾಹಿತಿ ಆಧಾರದಲ್ಲಿ ತನಿಖೆ ನಡೆಸಿದಾಗ ವಿಷಯ ಬಹಿರಂಗಗೊಂಡಿತ್ತು. ಸಮಗ್ರ ತನಿಖೆ ನಂತರ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿದ್ದಾರೆ. ಪ್ರಸ್ತುತ ಮಗು ಬಾಲಕಿಯ ಸಂಬಂಧಿಕರ ಆರೈಕೆಯಲ್ಲಿದೆ.