ಕರಾವಳಿ ಜಿಲ್ಲೆಗಳಲ್ಲಿ ಅ.10 ರವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಅ.10 ರವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹಲವೆಡೆ ಅ.10ರವರೆಗೆ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಸೋಮವಾರ ಬೆಳಗ್ಗೆ ಕರಾವಳಿಯ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಘಟ್ಟ ಪ್ರದೇಶಗಳಲ್ಲೂ ಭಾನುವಾರ ಸಂಜೆ ಗುಡುಗು ಸಹಿತ ಮಳೆ ದಾಖಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಹಗಲು ಮೋಡ ಕವಿದ ವಾತಾವರಣವಿದ್ದು, ತುಂತುರುದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ತೀರದಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನದ ಬಳಿಕ ಮಳೆ ಕಡಿಮೆಯಾಗಬಹುದು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅ.10ರವರೆಗೆ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ವೇಳೆ ಗುಡುಗು ಸಹಿತ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. 

ಇದೇ ವೇಳೆ, ಭಾರತೀಯ ಹವಾಮಾನ ಇಲಾಖೆ ಅ.5ರಂದು ನೀಡಿರುವ ಉಪವಿಭಾಗವಾರು ಎಚ್ಚರಿಕೆಯಲ್ಲಿ ಕರಾವಳಿ ಕರ್ನಾಟಕಕ್ಕೆ ಇಂದು ಗುಡುಗು-ಮಿಂಚು ಹಾಗೂ ಭಾರಿ ಮಳೆಯ ಸಾಧ್ಯತೆಯನ್ನು ಸೂಚಿಸಿದ್ದು, ಅ.6ರಿಂದ ಅ.10ರವರೆಗೆ ಯಾವುದೇ ಎಚ್ಚರಿಕೆ ನೀಡಿಲ್ಲ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article