ಅ.15 ರಂದು ದಸರಾ ಉದ್ಘಾಟನೆಗೆ ಆಗಮಿಸಲಿದ್ದಾರೆ ನಾಡದೊರೆ!

ಅ.15 ರಂದು ದಸರಾ ಉದ್ಘಾಟನೆಗೆ ಆಗಮಿಸಲಿದ್ದಾರೆ ನಾಡದೊರೆ!

ಮಂಗಳೂರು: ವಿಶ್ವ ವಿಖ್ಯಾತ ಮಂಗಳೂರು ದಸರಾ ಮಹೋತ್ಸವದಲ್ಲಿ ನಿತ್ಯ ಸಾವಿರಾರು ಮಂದಿ ಪಾಲ್ಗೊಳ್ಳುತ್ತಿದ್ದು, ನಗರಕ್ಕೆ ಹೊಸ ಕಳೆ ಬಂದಿದೆ.

ಅ.15 ರಂದು ಸಂಜೆ ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ದೊರೆಯಲಿದೆ. ನಾಡದೊರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಾಲ್ಗೊಳ್ಳುವ ಮೂಲಕ ಮಂಗಳೂರು ದಸರಾವನ್ನು ಉದ್ಘಾಟಿಸಲಿದ್ದಾರೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವ ಹಾಗೂ ಉಡುಪಿ ಉಚ್ಚಿಲದಲ್ಲಿ ನಡೆಯಲಿರುವ ಮಹಿಳಾ ದಸರಾವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.

ಸಂಜೆ 4.10ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು 4.40ಕ್ಕೆ ಕಾಪು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಮಹಿಳಾ ದಸರಾ ಉದ್ಘಾಟನೆ ಹಾಗೂ ಸಿಎಂಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಸಂಜೆ 6 ಕ್ಕೆ ಅಲ್ಲಿಂದ ಮಂಗಳೂರಿನತ್ತ ಹೊರಡಲಿದ್ದಾರೆ. 6.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿ ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ರಾತ್ರಿ 8ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article