ಶಕ್ತಿ ಎಜ್ಯುಕೇಶನ್ ಟ್ರಸ್ಟ್ ಮಂಗಳೂರಿನಿಂದ 2.05 ಕೋಟಿ ರೂ. ಮೌಲ್ಯದ ವಿದ್ಯಾರ್ಥಿವೇತನ ಘೋಷಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ SADHANA-30 ಪ್ರವೇಶ ಪರೀಕ್ಷೆ ಹಾಗೂ ಶಕ್ತಿ ಪ್ರತಿಭಾ ಪರೀಕ್ಷೆ

ಶಕ್ತಿ ಎಜ್ಯುಕೇಶನ್ ಟ್ರಸ್ಟ್ ಮಂಗಳೂರಿನಿಂದ 2.05 ಕೋಟಿ ರೂ. ಮೌಲ್ಯದ ವಿದ್ಯಾರ್ಥಿವೇತನ ಘೋಷಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ SADHANA-30 ಪ್ರವೇಶ ಪರೀಕ್ಷೆ ಹಾಗೂ ಶಕ್ತಿ ಪ್ರತಿಭಾ ಪರೀಕ್ಷೆ


ಮಂಗಳೂರು: ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶಕ್ತಿ ಎಜ್ಯುಕೇಶನ್ ಟ್ರಸ್ಟ್, ಮಂಗಳೂರು, ತನ್ನ ಶಿಕ್ಷಣ ಸಂಸ್ಥೆಗಳ ಮೂಲಕ ಒಟ್ಟು 2.05 ಕೋಟಿ ರೂ. ಮೌಲ್ಯದ ವಿದ್ಯಾರ್ಥಿವೇತನವನ್ನು ಘೋಷಿಸಿದೆ.


ಶಕ್ತಿನಗರದ ಶಕ್ತಿ ರೆಸಿಡೆನ್ಯಿಯಲ್ ಶಾಲೆಯು 150 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ 1.05 ಕೋಟಿ ರೂ. ಮೌಲ್ಯದ ವಿದ್ಯಾರ್ಥಿವೇತನವನ್ನು ಘೋಷಿಸಿದೆ. 

ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಯೋಜನೆಯ ಭಾಗವಾಗಿ, 6ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ SADHANA-30 ಫೌಂಡೇಶನ್ ಪ್ರವೇಶ ಪರೀಕ್ಷೆ ಆಯೋಜಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಉತ್ತಮ ಶಿಕ್ಷಣದ ಅವಕಾಶ ಒದಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

SADHANA-30 ಪರೀಕ್ಷೆಯ ವಿವರಗಳು:

6ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ, ನೋಂದಣಿಗೆ ಕೊನೆಯ ದಿನಾಂಕ: 20-10-2026 ಆಗಿದ್ದು, ಪರೀಕ್ಷೆಯ 25-10-2026 ರಂದು ನಡೆಯಲಿದೆ. ಪರೀಕ್ಷೆಯು ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಯಿಯಲ್ ಶಾಲೆಯ ಆವರಣದಲ್ಲಿ ನಡೆಯಲಿದೆ. ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದವರಿಗೆ ಉಚಿತ ಶಿಕ್ಷಣ ನೀಡಲಾಗುವುದು.

ಶಕ್ತಿ ಪಿಯು ಕಾಲೇಜಿನಿಂದ 1 ಕೋಟಿ ರೂ. ವಿದ್ಯಾರ್ಥಿವೇತನ:

ಶಕ್ತಿ ಪಿಯು ಕಾಲೇಜು, ಮಂಗಳೂರು, ಪದವಿಪೂರ್ವ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಹಾಗೂ ಶೈಕ್ಷಣಿಕ ಸಾಧನೆಗೆ ಉತ್ತೇಜನ ನೀಡುವ ಉದ್ದೇಶದಿಂದ 1 ಕೋಟಿ ರೂ. ಮೌಲ್ಯದ ವಿದ್ಯಾರ್ಥಿವೇತನವನ್ನು ಘೋಷಿಸಿದೆ.

ಇದರ ಜೊತೆಗೆ, ವಿದ್ಯಾರ್ಥಿಗಳಲ್ಲಿರುವ ಶೈಕ್ಷಣಿಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈಗಾಗಲೇ 10ನೇ ತರಗತಿ (ಸಿಬಿಎಸ್‌ಇ, ಕರ್ನಾಟಕ ರಾಜ್ಯ ಪಠ್ಯಕ್ರಮ, ಐಸಿಎಸ್‌ಇ ಹಾಗೂ ಇತರ ಪಠ್ಯಕ್ರಮದ)ವಿದ್ಯಾರ್ಥಿಗಳಿಗೆ ಶಕ್ತಿ ಪ್ರತಿಭಾ ಪರೀಕ್ಷೆಯನ್ನು ಪರಿಚಯಿಸಲಾಗಿದೆ. ಈ ಪರೀಕ್ಷೆಯ ನೋಂದಣಿ, ಅರ್ಹತೆ, ಪರೀಕ್ಷಾ ದಿನಾಂಕ ಮತ್ತು ವಿದ್ಯಾರ್ಥಿವೇತನದ ವಿವರಗಳಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಲೇಜನ್ನು ಸಂಪರ್ಕಿಸಬಹುದು.

ಈ ಎರಡೂ ಮಹತ್ವದ ಯೋಜನೆಗಳ ಮೂಲಕ ಶಕ್ತಿ ಎಜ್ಯುಕೇಶನ್ ಟ್ರಸ್ಟ್, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶಗಳನ್ನು ಒದಗಿಸಲು ಹಾಗೂ ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಬದ್ಧವಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಟ್ರಸ್ಟ್ ಮನವಿ ಮಾಡಿದೆ.

ವಿದ್ಯಾರ್ಥಿವೇತನದ ಪ್ರಮುಖ ವಿವರಗಳು:

ಶಕ್ತಿ ರೆಸಿಡೆನ್ಷಿಯಲ್ ಶಾಲೆಯಲ್ಲಿ 150 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು, ಇದಕ್ಕೆ 1.05 ಕೋಟಿ ರೂ. ಮೌಲ್ಯದ ವಿದ್ಯಾರ್ಥಿವೇತನ ಮೀಸಲಿಡಲಾಗಿದೆ., ಶಕ್ತಿ ಪಿಯು ಕಾಲೇಜಿನಲ್ಲಿ 1 ಕೋಟಿ ರೂ. ಮೌಲ್ಯದ ವಿದ್ಯಾರ್ಥಿವೇತನ ನೀಡಲಾಗುವುದು. ಒಟ್ಟು 2.05 ಕೋಟಿ ರೂ. ವಿದ್ಯಾರ್ಥಿ ವೇತನ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಶಕ್ತಿ ಎಜ್ಯುಕೇಶನ್ ಟ್ರಸ್ಟ್, ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪಿಯು ಕಾಲೇಜು, ಶಕ್ತಿನಗರ, ಮಂಗಳೂರು, ಕರ್ನಾಟಕ. ಶಕ್ತಿ ಪಿಯು ಕಾಲೇಜು ಪ್ರವೇಶಾತಿ ಮೊಬೈಲ್ ಸಂಖ್ಯೆ: 9686000046/ 7349244087, ವೆಬ್‌ಸೈಟ್: shakthi.edu.in ಸಂಪರ್ಕಿಸಬಹುದಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article