ಅ.20 ರಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಂಗಳೂರು ಪ್ರವಾಸ

ಅ.20 ರಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಂಗಳೂರು ಪ್ರವಾಸ


ಮಂಗಳೂರು: ಕರಾವಳಿ ಕರ್ನಾಟಕದ ಮಹಾಉತ್ಸವವಾಗಿ ರೂಪುಗೊಂಡಿರುವ ಮಂಗಳೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯೆ ಬಿ.ಕೆ. ಹರಿಪ್ರಸಾದ್ ಅವರು ಅ.20 ಮಂಗಳೂರಿಗೆ ಆಗಮಿಸಲಿದ್ದಾರೆ.

ಸಂಜೆ 3.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನಕ್ಕೆ ಆಗಮಿಸುವ ಬಿ.ಕೆ. ಹರಿಪ್ರಸಾದ್ ಅವರು 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಲಿದ್ದಾರೆ. ಇದಾದ ಬಳಿಕ 5 ಗಂಟೆಗೆ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಆವರಣದ ಆಚಾರ್ಯ ಮಠದಲ್ಲಿ ನಡೆಯುವ ಮಂಗಳೂರು ಶಾರದಾ ಮಹೋತ್ಸವಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿರುವರು. ಸಂಜೆ 8 ಗಂಟೆಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಕೆಪಿಸಿಸಿ ಕಚೇರಿ ಮೂಲಗಳು ತಿಳಿಸಿವೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article