ನ.6 ರಂದು ಮಂಗಳೂರಿನಲ್ಲಿ ಪ್ರಜಾತಂತ್ರ ಉಳಿಸಿ ಅರಾಜಕತೆ ಅಳಿಸಿ ಕಾರ್ಯಕ್ರಮ

ನ.6 ರಂದು ಮಂಗಳೂರಿನಲ್ಲಿ ಪ್ರಜಾತಂತ್ರ ಉಳಿಸಿ ಅರಾಜಕತೆ ಅಳಿಸಿ ಕಾರ್ಯಕ್ರಮ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಉಡುಪಿ ಮತ್ತು ದ.ಕ. ಜಿಲ್ಲೆಯ ಸಂಸದರು, ಶಾಸಕರು, ಪದಾಧಿಕಾರಿಗಳ ಸಭೆ ಅ.27 ರಂದು ನಡೆಯಿತು.

ಸಭೆಯಲ್ಲಿ ಬಿಜೆಪಿ ರಾಷ್ಟ್ರಿಯ ಅಧ್ಯಕ್ಷರ ನಿರ್ದಾರದಂತೆ ಪ್ರಜಾತಂತ್ರ ಉಳಿಸಿ ಅರಾಜಕತೆಯನ್ನು ತೊಲಗಿಸಲು ಬೃಹತ್ ಪಾದಯಾತ್ರೆ ಸಭೆ, ಸಂವಾದ ಇನ್ನಿತರ ಜನಜಾಗ್ರತಿ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ. 

ಪ್ರಮುಖವಾಗಿ ಎಸ್.ಐ.ಆರ್. ವಿರುದ್ಧ ಅಪಪ್ರಚಾರ ಮಾಡುತ್ತಿರುವ ಕಾಂಗ್ರೆಸ್, ಇನ್ನಿತ್ತರ ಪ್ರತಿಪಕ್ಷಗಳು, ದೇಶ ವಿರೋಧಿ ಶಕ್ತಿಗಳೊಂದಿಗೆ ಕೈ ಜೋಡಿಸುವ ರೀತಿಯಲ್ಲಿ ದೇಶದಲ್ಲಿ ಅರಾಜಕತೆ ಮೂಡಿಸುತ್ತಿರುವುದು ಕಳವಳಕಾರಿಯಾಗಿದ್ದು, ಇದರ ಬಗ್ಗೆ ಸತ್ಯಾಸತ್ಯತೆಯನ್ನು ಜನರಿಗೆ ತಿಳಿಸಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ (ಉಡುಪಿ, ದ.ಕ.ಜಿಲ್ಲೆಯ) ಕಾರ್ಯಕ್ರಮವನ್ನು ನ.6 ರಂದು ಸಂಜೆ 3 ಗಂಟೆಗೆ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದ ಬಳಿಯಿಂದ ಪಾದಯಾತ್ರೆ ಮೂಲಕ ಹೊರಟು, ಕದ್ರಿ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ. 

ಈ ಸಭೆಯಲ್ಲಿ ಕೇಂದ್ರ, ರಾಜ್ಯ ಪಾರ್ಟಿಯ ನಾಯಕರು, ಕೇಂದ್ರ ಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಸಭೆಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ, ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಭಾಗ ಪ್ರಭಾರಿ ಭಾರತೀಶ್, ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಶಾಸಕರಾದ ಡಾ. ವೈ ಭರತ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಉಮನಾಥ್ ಕೋಟ್ಯಾನ್, ಕಿಶೋರ್ ಕುಮಾರ್ ಪುತ್ತೂರು, ಉದಯ ಕುಮಾರ್ ಶೆಟ್ಟಿ, ಪ್ರತಾಪಸಿಂಹ ನಾಯಕ್, ಕ್ಯಾ. ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ರೇಷ್ಮ ಉದಯ ಕುಮಾರ್ ಶೆಟ್ಟಿ, ಶ್ರೀಕಾಂತ್ ನಾಯಕ್, ಹೆರ್ಗೆ ದಿನಕರ ಶೆಟ್ಟಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article