ಫರಂಗಿಪೇಟೆಯ ಸ್ಟುಡಿಯೋ ಮಾಲಕನ ಕೊಲೆ ಯತ್ನ ಪ್ರಕರಣ: ನಾಲ್ವರು ಆರೋಪಿಗಳಿಗೆ 7 ವರ್ಷಗಳ ಜೈಲು ಶಿಕ್ಷೆ

ಫರಂಗಿಪೇಟೆಯ ಸ್ಟುಡಿಯೋ ಮಾಲಕನ ಕೊಲೆ ಯತ್ನ ಪ್ರಕರಣ: ನಾಲ್ವರು ಆರೋಪಿಗಳಿಗೆ 7 ವರ್ಷಗಳ ಜೈಲು ಶಿಕ್ಷೆ

ಮಂಗಳೂರು: ಆರು ವರ್ಷಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಂಟ್ವಾಳ ಫರಂಗಿಪೇಟೆಯಲ್ಲಿ ಸ್ಟುಡಿಯೊ ಮಾಲಕ ದಿನೇಶ್ ಎಂಬವರ ಕೊಲೆಗೆ ಯತ್ನಿಸಿದ ಪ್ರಕರಣದ ನಾಲ್ವರು ಆರೋಪಿಗಳಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಲಾ ಏಳು ವರ್ಷ ಜೈಲು ಶಿಕ್ಷೆ ಮತ್ತು 88 ಸಾವಿರ ರೂ. ದಂಡ ವಿಧಿಸಿದೆ. 

ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹ್ಮಾನ್ (ಮುನ್ನಿ) ಹಾಗೂ ಮಹಮ್ಮದ್ ಸವಾದ್ ಶಿಕ್ಷೆಗೆ ಒಳಗಾದ ಆರೋಪಿಗಳಾಗಿದ್ದಾರೆ.

2020ರ ಅಕ್ಟೋಬರ್ 28ರಂದು ಸಂಜೆ ಫರಂಗಿಪೇಟೆಯಲ್ಲಿನ ಸ್ಟುಡಿಯೋದಲ್ಲಿದ್ದ ಅದರ ಮಾಲಕ ದಿನೇಶ್‌ರ ಮೇಲೆ ಪೂರ್ವದ್ವೇಷದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೆ ಯತ್ನಿಸಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2020 ಕಲಂ: ಕಲಂ: 307.324.326.504.506 ಜೊ 34 ಭಾ.ದಂ.ಸಂ ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಗಳಾದ ಮುಹಮ್ಮದ್ ಸೈಫುದಿನ್, ಮುಹಮ್ಮದ್ ಅರ್ಷದ್, ಅಬ್ದುಲ್ ರಹ್ಮಾನ್ (ಮುನ್ನಿ) ಹಾಗೂ ಮುಹಮ್ಮದ್ ಸವಾದ್‌ರನ್ನು ಬಂಧಿಸಿ ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶ ಜಗದೀಶ್ ವಿ.ಎನ್. ಅ.28ರಂದು ನಾಲ್ವರು ಆರೋಪಿಗಳಿಗೂ ತಲಾ ಏಳು ವರ್ಷ ಜೈಲು ಶಿಕ್ಷೆ ಮತ್ತು 88 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸಂತ್ರಸ್ತರ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ನಾಯಕ್ ವಾದಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article