ದಸರಾ ಸಂಭ್ರಮದ ಸಂದರ್ಭ ಪರೀಕ್ಷೆ: ಜಿಲ್ಲಾಧಿಕಾರಿಗೆ ದೂರು
Monday, October 12, 2026
ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವ ಮಂಗಳೂರಿನ ಬೆಂದೂರ್ ಬಳಿಯ ಖಾಸಗಿ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಸೋಮವಾರ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅ.12ರಿಂದ ಅ.28ರವರೆಗೆ ಪರೀಕ್ಷೆ ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಎಬಿವಿಪಿ ಸಂಘಟನೆಯೂ ಪ್ರತಿಭಟನೆಗೆ ಬೆಂಬಲ ನೀಡಿದೆ.
ಪರೀಕ್ಷೆ ಮುಂದೂಡುವಂತೆ ಮನವಿ ಸಲ್ಲಿಸಿದರೂ ಕಾಲೇಜು ಆಡಳಿತ ಸ್ಪಂದಿಸಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ದಸರಾ ಆಚರಣೆ ಹಾಗೂ ಸಂಭ್ರಮದಲ್ಲಿ ಭಾಗವಹಿಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೂ ದೂರು ನೀಡಿವೆ.