ಕಾಂಗ್ರೆಸ್ ಗೆಲುವಿಗೆ ವೇಗವಾಗಿ ಕೆಲಸ ಮಾಡುವಂತೆ ಸೂಚನೆ: ಪದ್ಮರಾಜ್ ಆರ್. ಪೂಜಾರಿ
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆ ಸೇರಿದಂತೆ ಸ್ಥಳೀಯಾಡಳಿತಗಳ ನಿಕಟಪೂರ್ವ ಸದಸ್ಯರನ್ನು ಕರೆಸಿ ಅವರೊಂದಿಗೆ ಚರ್ಚಿಸಿ ಸಂಘಟನಾ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವಂತೆ ಸಚಿವ ಖಾದರ್ ಸೂಚಿಸಿದ್ದಾರೆ ಎಂದರು.
ಜಿಲ್ಲೆಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರ 10 ಕೋಟಿ ರು. ಅನುದಾನ ಇರಿಸಿದೆ. ಈ ಬಗ್ಗೆ ಇತ್ತೀಚೆಗೆ ದಲಿತ ಮುಖಂಡರು ಸೇರಿ ಮುಖ್ಯಮಂತ್ರಿಗಳನ್ನು ಸೇರಿಸಿಕೊಂಡು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ ಎಂದರು.
ಡಿಸಿ ಮನ್ನಾ ಭೂಮಿ, ಎಸ್ಸಿ ಎಸ್ಟಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು.
ತುಳುವನ್ನು ರಾಜ್ಯದ ೨ನೇ ಅಧಿಕೃತ ಭಾಷೆ ಎಂದು ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಮಾನ್ಯ ಮಾಡಿರುವುದು ಶ್ಲಾಘನೀಯ ಎಂದರು.
ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷ ಸೋಲು ಕಂಡ ಕ್ಷೇತ್ರಗಳನ್ನು ಮರಳಿ ಕಾಂಗ್ರೆಸ್ಗೆ ವಶಪಡಿಸಿಕೊಳ್ಳಲು ತನ್ನ ಎಂಎಲ್‌ಎಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಬಿಜೆಪಿಯ ಅಪಪ್ರಚಾರವನ್ನು ಹೋಗಲಾಡಿಸಿ ಅಂತಹ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುವ ಜವಾಬ್ದಾರಿ ಎಂಎಲ್‌ಎಗಳ ಮೇಲಿದೆ ಎಂದರು.