ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ನಿರ್ಲಕ್ಷ್ಯ ಆರೋಪ: ಸುಪ್ರಿಂ ಮೊರೆ ಹೋಗಲು ನಿರ್ಧಾರ

ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ನಿರ್ಲಕ್ಷ್ಯ ಆರೋಪ: ಸುಪ್ರಿಂ ಮೊರೆ ಹೋಗಲು ನಿರ್ಧಾರ

ಮಂಗಳೂರು: ಕಸ್ತೂರಿ ರಂಗನ್ ವರದಿ ಜಾರಿಗೆ ತರುವ ನಿಟ್ಟಿನಲ್ಲಿ ಕರಡು ಅಧಿಸೂಚನೆ ಕುರಿತಂತೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಂಘದ ಕಾರ್ಯದರ್ಶಿ ಬೆನೆಡಿಕ್ಟ್ ಫೆರ್ನಾಂಡಿಸ್ ಆರೋಪಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಅಸಹಕಾರ ಮತ್ತು ತಿರಸ್ಕಾರ ನಿಲುವಿನ ವಿರುದ್ಧ ಸುಪ್ರೀಂಕೋರ್ಟ್ ಅಥವಾ ಎನ್ ಜಿಟಿ ಮೊರೆ ಹೋಗಲು ನಿರ್ಧರಿಸಲಾಗಿದೆ ಎಂದರು.

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದ ಅಂತಿಮ ಅಧಿಸೂಚನೆಯನ್ನು ದುರ್ಬಲಗೊಳಿಸಲು ಅಥವಾ ನಿರ್ದಿಷ್ಟವಾಗಿ ವಿಳಂಬಗೊಳಿಸಲು ರಾಜ್ಯ ಸರಕಾರ ಅಂಗೀಕರಿಸಿರುವ ಜಂಟಿ ಶಾಸಕಾಂಗ ನಿರ್ಣಯ ಮತ್ತು ಅದಕ್ಕೆ ಸಂಬಂಧಿಸಿದ ವೈಜ್ಞಾನಿಕ ಆಕ್ಷೇಪಣೆಗಳನ್ನು ಪರಿಗಣಿಸದಂತೆ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವನ್ನು ಕೋರುತ್ತೇವೆ ಎಂದವರು ಹೇಳಿದರು.

ಭಾರತ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹೊರಡಿಸಿದ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ತಮಿಳುನಾಡು ಮತ್ತು ಕೇರಳ ಸೇರಿದಂತೆ 6 ರಾಜ್ಯಗಳಲ್ಲಿ ಹರಡಿರುವ ಪಶ್ಚಿಮ ಘಟ್ಟಗಳ ಸುಮಾರು 56,825.7 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲು ಉದ್ದೇಶಿಸಲಾಗಿದೆ. ಆದರೆ ಕರ್ನಾಟಕದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದು ಬೆನೆಡಿಕ್ಟ್ ಫೆರ್ನಾಂಡಿಸ್ ಹೇಳಿದರು.

ಈ ಸುದ್ದಿಗೋಷ್ಠಿಯಲ್ಲಿ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಂಘದ ಅಧ್ಯಕ್ಷ ಚಾರ್ಲ್ಸ್ ಡಿ‘ಸೋಜಾ, ಉಪಾಧ್ಯಕ್ಷೆ ಆರತಿ ಅಶೋಕ್, ಸದಸ್ಯ ನಿಹಾಲ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article