ಲೈಂಗಿಕ ಕಿರುಕುಳ: ಧರ್ಮಗುರು ವಿರುದ್ಧ ಪೊಕ್ಸೊ

ಲೈಂಗಿಕ ಕಿರುಕುಳ: ಧರ್ಮಗುರು ವಿರುದ್ಧ ಪೊಕ್ಸೊ

ಮಂಗಳೂರು: ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಗರದ ವೆಲೆನ್ಸಿಯಾದ ಚರ್ಚ್ ವೊಂದರ ಧರ್ಮಗುರು ಸಿಪ್ರಿಯನ್ ಪಿಂಟೋ ಎಂಬವರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.

ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಫಾ.ಸಿಪ್ರಿಯನ್ ಪಿಂಟೋ ವಿರುದ್ಧ ಸಂತ್ರಸ್ತರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಅದರಂತೆ ರಕ್ಷಣಾ ನಿರ್ದೇಶನಾಲಯವು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ದ.ಕ. ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸೂಚನೆ ನೀಡಿತ್ತು. 

ಅಲ್ಲದೆ ಮೈಸೂರಿನ ಒಡನಾಡಿ ಸಂಸ್ಥೆ ಕೂಡ ಪ್ರಕರಣದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆಗ್ರಹಿಸಿತ್ತು. 

ಈ ಮಧ್ಯೆ ಸಂತ್ರಸ್ತ ಬಾಲಕನೋರ್ವ ನೀಡಿದ ದೂರಿನಂತೆ ಆರೋಪಿ ಫಾ.ಸಿಪ್ರಿಯನ್ ಪಿಂಟೋ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ PROTECTION OF CHILDREN FROM SEXUAL OFFENCES ACT 2012, (U/S 8,10) THE BHARATIYA NYAYA SANHITA (BNS), 2023, (U/S 75(2))ನಡಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article