ಶಾಸಕರುಗಳಿಂದ ಬೇಕಾಬಿಟ್ಟಿ ಹೇಳಿಕೆ: ಐವನ್ ಡಿಸೋಜ ಆಕ್ರೋಶ

ಶಾಸಕರುಗಳಿಂದ ಬೇಕಾಬಿಟ್ಟಿ ಹೇಳಿಕೆ: ಐವನ್ ಡಿಸೋಜ ಆಕ್ರೋಶ

ಮಂಗಳೂರು: ಇತ್ತೀಚೆಗೆ ನಗರದ ಆಗ್ನೆಸ್ ಕಾಲೇಜು ಮುಂಭಾಗ ನಡೆದ ಘಟನೆಯ ಹಿನ್ನೆಲೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಕಿಶೋರ್ ಕುಮಾರ್ ಪುತ್ತೂರು ಅವರು ಕದ್ರಿ ಪೊಲೀಸ್ ಸ್ಟೇಷನ್‌ಗೆ ತೆರಳಿ ಕಾಲೇಜು ಆಡಳಿತ ವಿರುದ್ಧ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಾನು ಕಾರಣ ಎಂದು ಶಾಸಕ ವೇದವ್ಯಾಸ ಕಾಮತ್  ಹೇಳಿರುವುದು ಸತ್ಯಕ್ಕೆ ದೂರವಾದುದು. ವೇದವ್ಯಾಸ್ ಕಾಮತ್ ಅವರು ತಮ್ಮ ಆರೋಪ ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ಪ್ರಮಾಣಕ್ಕೆ ಬರಬೇಕು ಎಂದು ಸವಾಲೆಸೆದರು.

ಎಬಿವಿಪಿ ಕಾರ್ಯಕರ್ತರು ಏಕಾಏಕಿ ಕಾಲೇಜಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಪರೀಕ್ಷೆ ನಡೆಯುತ್ತಿರುವ ಕಾರಣ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸರು ಅವರನ್ನು ತಡೆದು ವಶಕ್ಕೆ ತೆಗೆದುಕೊಂಡಿದ್ದಾರೆ. ಅದರಲ್ಲಿ ತಮ್ಮ ಪಾತ್ರ ಇಲ್ಲ ಎಂದು ಐವನ್ ಡಿಸೋಜ ಸ್ಪಷ್ಟಪಡಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article