ನಾಳೆ ಹೈಕೋರ್ಟ್ ಪೀಠ ಸ್ಥಾಪನೆ ಸಮಾಲೋಚನಾ ಸಭೆ

ನಾಳೆ ಹೈಕೋರ್ಟ್ ಪೀಠ ಸ್ಥಾಪನೆ ಸಮಾಲೋಚನಾ ಸಭೆ


ಮಂಗಳೂರು: ಕರಾವಳಿ ಮತ್ತು ಮಲೆನಾಡಿನ ಜನಸಾಮಾನ್ಯರಿಗೆ ಸುಲಭವಾಗಿ, ಕಡಿಮೆ ವೆಚ್ಚದಲ್ಲಿ ನ್ಯಾಯಸಿಗಬೇಕು ಎಂಬ ನಿಟ್ಟಿನಲ್ಲಿ ಅ.16 ರಂದು ದ.ಕ. ಯುನೈಟೆಡ್ ಲೋಗಲ್ ರಿಸರ್ಚ್ ಅಂಡ್ ಜಸ್ಟಿಸ್ ಟ್ರಸ್ಟ್ ನಿಂದ ಸಂಜೆ 4 ಗಂಟೆಗೆ ಸಮಾಲೋಚನಾ ಸಭೆ ನಡೆಯಲಿದೆ ಎಂದು ಹಿರಿಯ ವಕೀಲ ಬಿ. ಇಬ್ರಾಹಿಂ ತಿಳಿಸಿದರು.

ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಸಭೆಯು ನಗರದ ಸ್ಟೇಟ್ ಬ್ಯಾಂಕ್ ನಲ್ಲಿರುವ ಭಾರತೀಯ ರೆಡ್ ಕ್ರಾಸ್ ಕಟ್ಟಡದಲ್ಲಿ ನಡೆಯಲಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಜನರು ನ್ಯಾಯಕ್ಕಾಗಿ ಬೆಂಗಳೂರಿಗೆ ಪ್ರಯಾಣಿಸಬೇಕಾದವಸಂದರ್ಭದಲ್ಲಿ ದೂರದ ಪ್ರಯಾಣ, ಸಮಯದ ವ್ಯಯ, ವಸತಿ ವೆಚ್ಚ ಹಾಗೂ ಇತರ ಆರ್ಥಿಕ ಹೊರೆಗಳನ್ನು ಎದುರಿಸುತ್ತಿದ್ದು, ಬಡವರು, ಆರ್ಥಿಕವಾಗಿ ಹಿಂದುಳಿದವರು ಹಾಗೂ ದೂರದ ಊರುಗಳಿಗೆ ಪ್ರಯಾಣಿಸುವ ನಿಟ್ಟಿನಲ್ಲಿ ಸಮಸ್ಯೆ ಎದುರಿಸುತ್ತಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಶೀಘ್ರ ಮಂಗಳೂರಿನಲ್ಲಿ ಹೈಕೋರ್ಟ್ ಪೀಠವನ್ನು ಸ್ಥಾಪಿಸುವ ಕುರಿತು ಸಭೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು. ಸಂಸದರು. ವಿಧಾನ ಪರಿಷತ್ ಸದಸ್ಯರು, ವಿವಿಧ ವಕೀಲರ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳ ಗಣ್ಯರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಎ. ಮೊಹಮ್ಮದ್ ಹನೀಫ್, ಸರ್ಫರಾಝ್, ಅಶ್ರಫ್ ಅಗ್ನಾಡಿ, ಬಿ. ಮುಕ್ತಾರ್ ಅಹ್ಮದ್, ಜಿಶನ್ ಆಲಿ, ಮಹಮ್ಮದ್ ಅಸ್ಗರ್ ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article