ಸಿಎಂ ಡಿಕೆಶಿ ಮಂಗಳೂರು, ಉಡುಪಿ ಪ್ರವಾಸ ರದ್ದು

ಸಿಎಂ ಡಿಕೆಶಿ ಮಂಗಳೂರು, ಉಡುಪಿ ಪ್ರವಾಸ ರದ್ದು


ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೋಮವಾರದ ಕರಾವಳಿ ಪ್ರವಾಸ ಕೊನೆ ಕ್ಷಣದಲ್ಲಿ ರದ್ದಾಗಿದೆ.

ಈ ಬಗ್ಗೆ ಮಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಯಾಗಿರುವ ಬಿ.ಎಸ್. ಶ್ರೀಧರ್ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು ಅನಿವಾರ್ಯ ಕಾರಣದಿಂದ ಭೇಟಿ ರದ್ದಾಗಿದೆ ಎಂದು ತಿಳಿಸಿದ್ದಾರೆ.

ಅ.12 ರಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಮಹಿಳಾ ದಸರಾವನ್ನು ಉದ್ಘಾಟಿಸಬೇಕಿತ್ತು. ಸಂಜೆ 6.30ಕ್ಕೆ ಅವರು ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article