ಸೌಜನ್ಯ ಪ್ರಕರಣ ಮರು ತನಿಖೆ: ಎಸ್‌ಐಟಿ ಮಂಗಳೂರು, ಬೆಳ್ತಂಗಡಿಗೆ ಆಗಮನ

ಸೌಜನ್ಯ ಪ್ರಕರಣ ಮರು ತನಿಖೆ: ಎಸ್‌ಐಟಿ ಮಂಗಳೂರು, ಬೆಳ್ತಂಗಡಿಗೆ ಆಗಮನ


ಮಂಗಳೂರು: ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮರು ತನಿಖೆಗೆ ನಿಯೋಜನೆಗೊಂಡ ನೂತನ ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ಮಂಗಳೂರಿಗೆ ಆಗಮಿಸಿದೆ.

ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್, ಬೆಂಗಳೂರಿನ ಸಿಐಡಿ ಎಸ್ಪಿ ಲೋಕೇಶ್ ಜಗಲಾಸರ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ನಗರದಲ್ಲಿರುವ ಹಳೆ ಡಿಸಿ ಅಫೀಸ್ ನ 2ನೇ ಮಹಡಿಯಲ್ಲಿ ತೆರೆಯಲಾಗಿರುವ ಎಸ್‌ಐಟಿ ಕಚೇರಿಗೆ ಆಗಮಿಸಿದ ಅಧಿಕಾರಿಗಳು ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ತಂಡ ಎಸ್‌ಐಟಿ ಸದಸ್ಯರಾಗಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರೊಂದಿಗೆ ಚರ್ಚಿಸಿದೆ.

ಬೆಳ್ತಂಗಡಿಗೆ ಭೇಟಿ..

ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿಗೆ ಆಗಮಿಸಿದ್ದು, ಎಸ್‌ಐಟಿ ಕಚೇರಿಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯ ಸಮೀಪದಲ್ಲಿರುವ ಕಟ್ಟಡದ ಪರಿಶೀಲನೆ ನಡೆಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಕಚೇರಿ ಕಾರ್ಯನಿರ್ವಹಿಸಿದ್ದ ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಷದಲ್ಲಿರುವ ಕಟ್ಟಡದಲ್ಲಿನ ಸೌಲಭ್ಯಗಳ ಬಗ್ಗೆ ಸೌಜನ್ಯಾ ಪ್ರಕರಣದ ತನಿಖೆಗೆ ನಿಯೋಜಿತ ಎಸ್‌ಐಟಿಯ ಅಧಿಕಾರಿಗಳಾದ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಮತ್ತು ಐಪಿಎಸ್ ಅಧಿಕಾರಿ ಲೋಕೇಶ್ ಜಗಲಾಸರ್ ಗುರುವಾರ ಬೆಳಗ್ಗೆ ಪರಿಶೀಲಿಸಿದ್ದಾರೆ.

ಎಸ್‌ಐಟಿ ಕಚೇರಿಯ ಕೇಂದ್ರಸ್ಥಾನ ಮಂಗಳೂರಿನಲ್ಲಿ ಇರಲಿದೆಯೇ ಅಥವಾ ಬೆಳ್ತಂಗಡಿಯಲ್ಲಿ ಕಚೇರಿ ಇರಲಿದೆಯೇ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. 

ಸ್ಥಳೀಯವಾಗಿ ಕಚೇರಿಯಿದ್ದು ಕಾರ್ಯಾಚರಣೆ ನಡೆಸಲು ಅನುಕೂಲವಾಗುವಂತೆ ಬೆಳ್ತಂಗಡಿಯಲ್ಲೂ ಎಸ್‌ಐಟಿ ಕಚೇರಿ ಇರಲಿದೆ ಎನ್ನಲಾಗುತ್ತಿದೆ.

2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆಗೈಯಲಾಗಿದೆ. ಈ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಸೂಚಿಸಿದೆ. ಎಸ್‌ಐಟಿ ರಚಿಸಿ, ಮೂರು ತಿಂಗಳೊಳಗೆ ಅನುಸರಣೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್, ಬೆಂಗಳೂರಿನ ಸಿಐಡಿ ಎಸ್ಪಿ ಲೋಕೇಶ್ ಜಗಲಾಸರ್ ಹಾಗೂ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನ ಸೇರಿದಂತೆ ೧೬ ಅಧಿಕಾರಿಗಳು ಎಸ್‌ಐಟಿಯಲ್ಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article