ರಿಕ್ಷಾದಲ್ಲಿ ಮರೆತ ಚಿನ್ನವಿದ್ದ ಬ್ಯಾಗ್ ಮರಳಿಸಿದ ಚಾಲಕ

ರಿಕ್ಷಾದಲ್ಲಿ ಮರೆತ ಚಿನ್ನವಿದ್ದ ಬ್ಯಾಗ್ ಮರಳಿಸಿದ ಚಾಲಕ


ಮಂಗಳೂರು: ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲಿ ಮರೆತುಹೋದ ಮಹಿಳೆಗೆ ಚಾಲಕ ಸರವನ್ನು ಸುರಕ್ಷಿತವಾಗಿ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುವ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು. 

ಬ್ಯಾಗನ್ನು ಗಮನಿಸಿದ ರಿಕ್ಷಾ ಚಾಲಕ ಬಸವರಾಜ್ ಅವರು ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೆ ಪ್ರಾಮಾಣಿಕತೆ ಮೆರೆದಿದ್ದಾರೆ. ಬ್ಯಾಗ್‌ನಲ್ಲಿದ್ದ ೪೮ ಗ್ರಾಂ ಚಿನ್ನದ ನೆಕ್ಲೇಸ್ ಸರವನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ. ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ್ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇಂದಿನ ಕಾಲದಲ್ಲಿ ಅಮೂಲ್ಯ ವಸ್ತು ಸಿಕ್ಕರೂ ಅದನ್ನು ವಾರಸುದಾರರಿಗೆ ಮರಳಿಸುವ ಮನೋಭಾವ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ, ಬಸವರಾಜ್ ಅವರ ಪ್ರಾಮಾಣಿಕತೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article