ಬಾಲಕರಿಗೆ ಲೈಂಗಿಕ ಕಿರುಕುಳ: ಧರ್ಮಗುರು ಬಂಧನ
Sunday, October 18, 2026
ಮಂಗಳೂರು: ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಗರದ ವೆಲೆನ್ಸಿಯಾದ ಚರ್ಚ್ವೊಂದರ ಧರ್ಮಗುರು ಸಿಪ್ರಿಯನ್ ಪಿಂಟೋ ಅವರನ್ನು ಸಂಬಂಧಿಕರೊಬ್ಬರ ಮನೆಯಿಂದ ಪೊಲೀಸರು ಬಂಧಿಸಿದ್ದಾರೆ.
ಫಾ. ಸಿಪ್ರಿಯನ್ ಪಿಂಟೋ ಅವರು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಂಬಂಧ ಪೊಲೀಸರು ಧರ್ಮಗುರು ಸಿಪ್ರಿಯನ್ ಪಿಂಟೋ ಅವರನ್ನು ಬಂಧಿಸಿದ್ದಾರೆ.