ತ್ರಿಶಾ ಕಾಲೇಜಿನಲ್ಲಿ ರಕ್ತದಾನ ಶಿಬಿರ
Saturday, October 24, 2026
ಮಂಗಳೂರು: ತ್ರಿಶಾ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್ಮೆಂಟ್ ಮತ್ತು ತ್ರಿಶಾ ಸಂಧ್ಯಾ ಕಾಲೇಜ್ ಮಂಗಳೂರು ಇಲ್ಲಿನ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಹಾಗೂ ಹೆಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು.
ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಸಂಧ್ಯಾ ರಾಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಅತ್ತಾವರದ ಕೆಎಂಸಿ ಆಸ್ಪತ್ರೆಯ ರಕ್ತಕೇಂದ್ರದ ವೈದ್ಯಾಧಿಕಾರಿ ಡಾ. ಪ್ರೈಸ್ಲಿನ್, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿಯ ಅಧ್ಯಕ್ಷ ಡಾ. ವಿದ್ಯಾಧಾರಿ ಶೆಟ್ಟಿ, ಆಶಾ ನಾಗರಾಜ್, ರೀಜನ್ ಚೇರ್ಪರ್ಸನ್, ರೀಜನ್ 12 ಹಾಗೂ 285 ರಕ್ತದಾನ ಶಿಬಿರಗಳ ಸಂಘಟಕರಾದ ಎನ್.ಜೆ. ನಾಗೇಶ್ MJF ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ತ್ರಿಶಾ ಕಾಲೇಜಿನ IQAC ಘಟಕದ ಕಾರ್ಯದರ್ಶಿ ಸಹನಾ ಶೆಟ್ಟಿ ಹಾಗೂ ಯೂತ್ ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿ ಪ್ರೊ. ಶಿಲ್ಪಾ ಶೆಟ್ಟಿ, ಙಖಅ ಕಾರ್ಯದರ್ಶಿ ಚೈತನ್ಯ ಅವರು ಉಪಸ್ಥಿತರಿದ್ದರು.
ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ತಂಡದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿದರು. ಹಾಗೂ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.





