ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಪಕ್ಷವು ಈಗಿನಿಂದಲೇ ಪೂರ್ವ ತಯಾರಿ ನಡೆಸಬೇಕು: ಯು.ಟಿ. ಖಾದರ್ ಕರೆ
ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್.ಆರ್ ಪೂಜಾರಿ, ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸಿ ಕಾರ್ಯಕರ್ತರನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಮುಂಬರುವ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಿದ್ಧತೆ ನಡೆಸಲಾಗುವುದು ಎಂದು ಹೇಳಿದರು.
ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹಾಗೂ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯನ್ನಾಗಿಸಲು ಮಹತ್ವದ ತೀರ್ಮಾನ ಕೈಗೊಂಡಿರುವುದು ಅಭಿನಂದಿಸಿ ಜಿಲ್ಲೆಯಲ್ಲಿ ಖಾಲಿಯಿರುವ ವಿವಿಧ ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ಶೀಘ್ರದಲ್ಲಿ ನಾಮನಿರ್ದೇಶನಗೊಳಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್.ಲೋಬೊ, ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಎಂ.ಎಸ್.ಮಹಮ್ಮದ್, ಸೃಜನ್ ಸಂಘನ್ ಜಿಲ್ಲಾ ವೀಕ್ಷಕರಾದ ಡಾ.ಅಂಶುಮ್ನಾಥ್, ಸತೀಶ್, ಸದಾಶಿವ, ಮೂಡ ಅಧ್ಯಕ್ಷ ಸಂತೋಷ್ ಶೆಟ್ಟಿ ಸೇರಿದಂತೆ ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಕೆಪಿಸಿಸಿ ಸದಸ್ಯರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಮ.ನ.ಪಾ ವಿಜೇತ, ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪಂಗಡ ಘಟಕಗಳ ಮುಖಂಡರ ಸಭೆ ನಡೆಯಿತು.


