ಎಂಆರ್‌ಪಿಎಲ್ ವಿರುದ್ಧ ಎಫ್‌ಐಆರ್

ಎಂಆರ್‌ಪಿಎಲ್ ವಿರುದ್ಧ ಎಫ್‌ಐಆರ್

ಮಂಗಳೂರು: ಎಂಆರ್‌ಪಿಎಲ್‌ನ 3ನೇ ಪೇಸ್‌ನಲ್ಲಿರುವ ‘ಕೋಕರ್ ಹೈಡ್ರೋ ಟ್ರೀಟರ್ ಯುನಿಟ್’ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಓರ್ವ ಮೃತಪಟ್ಟು, 12 ಮಂದಿ ಗಾಯಗೊಂಡಿದ್ದಾರೆ.

ರವಿಪೂಜಾರಿ, ರಾಜೇಶ್ ಪ್ರಸಾದ್, ಇಂದ್ರಜಿತ್, ರಮಣ್ ಕುಮಾರ್,ಲೋಕೇಶ್ ಕುಳಾಯಿ, ಜಯರಾಮ್, ಜೆರೋಮ್, ಅವಿನಾಶ್, ಅಕ್ಷಯ, ಜಗಜೀವನ್ ಸಿಂಗ್, ಶರತ್ ಶೆಟ್ಟಿ, ರಾಜೇಶ್ ಪೂಜಾರಿ ಈ ದುರಂತದಲ್ಲಿ ಗಾಯಗೊಂಡಿದ್ದಾರೆ. 

ಈ ಸಂಬಂಧ ಗಾಯಾಳು ಕಾರ್ಕಳದ ವಳಂಚರಬೆಟ್ಟು ನೆಲ್ಲಿಕಟ್ಟೆ ಹಿರ್ಗಾನ ನಿವಾಸಿ ರವಿ ಪೂಜಾರಿ ನೀಡಿದ ದೂರಿನಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ಪೈಕಿ ರಾಜೇಶ್ ಮತ್ತು ಮನೀಶ್ ಕರ್ಕೆಡ ಅವರಿಗೆ ಗಂಭಿರವಾದ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆ ಗಳಿಗೆ ಸಾಗಿಸುವ ಸಮಯ ಗಾಯಾಳು ಮನೀಶ್ ಕರ್ಕಡ ಮೃತಪಟ್ಟಿದ್ದಾರೆ. ಪೇಸ್-3ನಲ್ಲಿರುವ ‘ಕೋಕರ್ ಹೈಡ್ರೋ ಟ್ರೀಟರ್ ಯುನಿಟ್’ನ ಮುಖ್ಯಸ್ಥರು ಮತ್ತು ಎಮ್‌ಆರ್‌ಪಿಎಲ್ ಸಂಸ್ಥೆಯ ಮುಖ್ಯಸ್ಥರು ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮವಾಗಿ ಈ ದುರ್ಘಟನೆ ಸಂಭವಿದೆ ಎಂದು ಆರೋಪಿಸಿ ಅವರ ವಿರುದ್ಧ ರವಿ ಪೂಜಾರಿ ನೀಡಿದ ದೂರಿನಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

54 ಮನೆಗಳು ಮತ್ತು 8 ಪ್ರಾರ್ಥನಾ ಕೇಂದ್ರಗಳಿಗೆ ಹಾನಿ:

ಎಂಆರ್‌ಪಿಎಲ್ ಸ್ಫೋಟ ಪ್ರಕರಣದಲ್ಲಿ ಮೂರು ಗ್ರಾಮಗಳ 54 ಮನೆಗಳು ಮತ್ತು 8 ಪ್ರಾರ್ಥನಾ ಕೇಂದ್ರಗಳಿಗೆ ಹಾನಿಯಾಗಿದೆ. 

ಜೋಕಟ್ಟೆ ಗ್ರಾಮದ 25 ಮತ್ತು ಕಳವಾರು ಗ್ರಾಮದ 19 ಹಾಗೂ ಬಾಳ ಗ್ರಾಮದ 10 ಸಹಿತ ಒಟ್ಟು 54 ಮನೆಗಳಿಗೆ ಹಾನಿಯಾಗಿವೆ. ಅದಲ್ಲದೆ ಜೋಕಟ್ಟೆ ಗ್ರಾಮದ 5 ಮತ್ತು ಕಳವಾರು ಗ್ರಾಮದ 3 ಸಹಿತ ಒಟ್ಟು 8 ಪ್ರಾರ್ಥನಾ ಕೇಂದ್ರಗಳಿಗೆ ಹಾನಿಯಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article