ಪೂವಮ್ಮ ಅವರಿಗೆ ಸತೀಶ್ ಕುಂಪಲ ಅಭಿನಂದನೆ

ಪೂವಮ್ಮ ಅವರಿಗೆ ಸತೀಶ್ ಕುಂಪಲ ಅಭಿನಂದನೆ


ಮಂಗಳೂರು: ಕೇಂದ್ರದಲ್ಲಿ ಬಿ.ಜೆ.ಪಿ. ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರ ಬಂದ ಬಳಿಕ ದೇಶದ ಕ್ರೀಡಾಳುಗಳು ಕ್ರೀಡಾ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಸಾಧನೆಗೈಯುತ್ತಿರುವುದು ಶ್ಲಾಘನೀಯ ಮತ್ತು ಕೇಂದ್ರ ಸರ್ಕಾರ ಇದಕ್ಕಾಗಿ ವಿಶೇಷವಾದ ಪ್ರಯತ್ನಗಳನ್ನು ಮಾಡುತ್ತಿದೆ. ಪ್ರಸ್ತುತ ನಡೆಯುತ್ತಿರುವ ಏಶ್ಯಾಡ್‌ನಲ್ಲಿ ಭಾರತ ಚಿನ್ನದ ಪದಕಗಳನ್ನು ಪಡೆಯುತ್ತಿದೆ. ನಮ್ಮ ಜಿಲ್ಲೆಯವರಾಗಿಯೇ ನೆಲೆಸಿರುವ ಪೂವಮ್ಮ ಅವರ ಸಾಧನೆ ನಮಗೆಲ್ಲರಿಗೂ ಹೆಮ್ಮೆ. ಈ ಸಂಧರ್ಭದಲ್ಲಿ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಮತ್ತು ಅವರಿಗೆ ಅಭಿನಂದನೆಯನ್ನು ಸಲ್ಲಿಸಿದರು. 

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಬಿ.ಜೆ.ಪಿ. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗಡೆ, ಕಾರ್ಯದರ್ಶಿ ಅಮಿತ್ ರಾಜ್, ಜಿಲ್ಲಾ ಮಾಧ್ಯಮ ಪ್ರಮುಖ್ ವಸಂತ್ ಜೆ.ಪೂಜಾರಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಗುರುಚರಣ್, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಮುಖ್ ಅಕ್ಷಯ್ ಆಳ್ವ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ರಾಹುಲ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article