ಆಸಿಡ್ ದಾಳಿಯ ಸಂತ್ರಸ್ಥರ ರಕ್ಷಣೆ: ಕಾನೂನು ನೆರವು ಕಾರ್ಯಾಗಾರ

ಆಸಿಡ್ ದಾಳಿಯ ಸಂತ್ರಸ್ಥರ ರಕ್ಷಣೆ: ಕಾನೂನು ನೆರವು ಕಾರ್ಯಾಗಾರ


ಮಂಗಳೂರು: ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಇತರೆ ಸಂಬಂಧಪಟ್ಟ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಆಸಿಡ್ ದಾಳಿಯ ಸಂತ್ರಸ್ಥರ  ರಕ್ಷಣೆಯ ಕುರಿತು ಒಂದು ದಿನದ ಅರಿವು ಕಾರ್ಯಾಗಾರ ನಗರದ ಸೈಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜಿನಲ್ಲಿ  ನಡೆಯಿತು. 

ಕಾರ್ಯಾಗಾರವನ್ನು ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಾನು ಕೆ. ಎಸ್ ಅವರು ಉದ್ಘಾಟಿಸಿ, ವಿಷಯದ ಮಹತ್ವ ಹಾಗೂ ಪ್ರಸ್ತುತ ಸಂದರ್ಭದಲ್ಲಿ ಅದರ ಅಗತ್ಯತೆಯ ಕುರಿತು ಮಾತನಾಡಿದರು. 

ಕಾರ್ಯಾಗಾರದಲ್ಲಿ ವಿವಿಧ ಕ್ಷೇತ್ರಗಳ ಇಲಾಖೆಗಳ ಜಿಲ್ಲಾ ಅಧಿಕಾರಿಗಳು  ಭಾಗವಹಿಸಿ, ಸಂಬಂಧಿತ ವಿಷಯಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನಿಸಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ  ಜಗದೀಶ್ ಶೇಣವ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಹೆಚ್.ಆರ್ ತಿಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್ ಎಂ.ಎಸ್., ಉಪ ಪೊಲೀಸ್ ಆಯುಕ್ತ ಕೆ. ರವಿಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ,  ಮಂಗಳೂರು ತಹಶೀಲ್ದಾರ್ ರಮೇಶ್ ಬಾಬು ಟಿ, ಮತ್ತಿತ್ತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article