ಸೋಮನಾಥ್ ಪುತ್ರನ್ ಮನೆಗೆ ವಿಹೆಚ್‌ಪಿ ಮುಖಂಡರ ಭೇಟಿ

ಸೋಮನಾಥ್ ಪುತ್ರನ್ ಮನೆಗೆ ವಿಹೆಚ್‌ಪಿ ಮುಖಂಡರ ಭೇಟಿ


ಮಂಗಳೂರು: ಅ.27 ರಂದು ಸುರತ್ಕಲ್‌ನ ಹೊಸಬೆಟ್ಟುವಿನಲ್ಲಿ ಆತ್ಮಹತ್ಯೆಗೆ ಶರಣಾದ ಅಮಾಯಕ ಸೋಮನಾಥ್ ಪುತ್ರನ್ ಮನೆಗೆ ಇಂದು ವಿಶ್ವ ಹಿಂದೂ ಪರಿಷತ್ ಮುಖಂಡರು ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶಿವಾನಂದ ಮೆಂಡನ್, ಬಜರಂಗದಳ ಸಂಚಾಲಕರಾದ ಪುನೀತ್ ಅತ್ತಾವರ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮನೋಹರ್ ಸುವರ್ಣ, ಜಯರಾಮ್ ಆಚಾರ್ಯ ಗಿರೀಶ್ ಕರ್ಕೇರ ಹಾಗೂ ವಿಶ್ವ ಹಿಂದೂ ಪರಿಷತ್ ಸುರತ್ಕಲ್ ಪ್ರಖಂಡದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಅಮಾಯಕ ಸೋಮನಾಥ್ ಅವರ ಪುತ್ರನ ಸಾವಿಗೆ ಕಾರಣರಾದವರ ವಿರುದ್ಧ ಜಿಲ್ಲಾಡಳಿತ ತಕ್ಷಣವೇ ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ತಕ್ಷಣ ನ್ಯಾಯ ಒದಗಿಸಬೇಕೆಂದು ರಾಜ್ಯ ಸರಕಾರಕ್ಕೆ ಆಗ್ರಹಿಸುತ್ತೇನೆ ಎಂದು ವಿಶ್ವ ಹಿಂದೂ ಪರಿಷದ್‌ನ ಮುಖಂಡ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article