ಸೌಜನ್ಯ ಪ್ರಕರಣ: ಮರಣೋತ್ತರ ಪರೀಕ್ಷೆ ನಡೆಸಿದ ಸಿಬ್ಬಂದಿಗೆ ನೋಟಿಸ್

ಸೌಜನ್ಯ ಪ್ರಕರಣ: ಮರಣೋತ್ತರ ಪರೀಕ್ಷೆ ನಡೆಸಿದ ಸಿಬ್ಬಂದಿಗೆ ನೋಟಿಸ್

ಮಂಗಳೂರು: ಉಜಿರೆ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆ ನಡೆಸುತ್ತಿರುವ ಎಸ್‌ಐಟಿ ಸೌಜನ್ಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ 

ಸಿಬ್ಬಂದಿಗೆ ನೋಟಿಸ್ ನೀಡಿದ್ದಾರೆ.

ಜತೆಗೆ ಆರಂಭದಿಂದ ಕೊನೆಯ ತನಿಖೆಯವರೆಗೂ ಇದ್ದ ಪೊಲೀಸ್ ಸಿಬ್ಬಂದಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಆರಂಭದಲ್ಲಿ ಸಾಕ್ಷ್ಯ ನಾಶ ಮಾಡಿದ ಬಗ್ಗೆ ಇವರ ಮೇಲೆ ಆರೋಪ ಕೇಳಿಬಂದಿತ್ತು. ಆರೋಪಗಳ ಹಿನ್ನಲೆಯಲ್ಲಿ ಎಸ್‌ಐಟಿ ವಿಚಾರಣೆಗೆ ಮುಂದಾಗಿದ್ದು, ಅ.30ರಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್ನಲ್ಲಿ ಸೂಚಿಸಲಾಗಿದೆ

2012ರಲ್ಲಿ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿ ಯೋಗೇಶ್ ಗೌಡ ಅವರಿಗೂ ನೋಟಿಸ್ ನೀಡಲಾಗಿತ್ತು. ತನಿಖೆಯ ಪ್ರಾಥಮಿಕ ಹಂತದಲ್ಲಿ ಪೊಲೀಸ್ ಅಧಿಕಾರಿ ಯೋಗೇಶ್ ಸಾಕ್ಷ್ಯನಾಶ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

15ಕ್ಕೂ ಹೆಚ್ಚು ಮದಿಗೆ ನೋಟಿಸ್..

ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗೆ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. 2012ರಲ್ಲಿ ನಡೆದ ಈ ಘಟನೆಯ ತನಿಖೆಯ ಆರಂಭದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಸಿಐಡಿ ಮತ್ತು ಸಿಬಿಐ ಹಂತದವರೆಗೂ ನಡೆಸಿದ ಎಲ್ಲ ಅಧಿಕಾರಿಗಳಿಗೆ ಸಮನ್ಸ್ ನೀಡಲಾಗಿದೆ. ಎಸ್‌ಐಟಿ ಈ ಅಧಿಕಾರಿಗಳನ್ನು ಸಿಆರ್‌ಪಿಸಿ ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article