ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯ ಅನುಷ್ಠಾನಕ್ಕಾಗಿ ಸೇವಾ ಸೇತು ಕ್ಯಾಂಪ್‌ಗಳನ್ನು ಆಯೋಜನೆ

ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯ ಅನುಷ್ಠಾನಕ್ಕಾಗಿ ಸೇವಾ ಸೇತು ಕ್ಯಾಂಪ್‌ಗಳನ್ನು ಆಯೋಜನೆ

ಮಂಗಳೂರು: ಮಂಗಳೂರು ವಿದುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ವತಿಯಿಂದ ‘ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ’ ಬಿಜ್ಲಿ ಯೋಜನೆಯ ಅನುಷ್ಠಾನಕ್ಕೆ ಸಹಕಾರ ನೀಡುವ ಉದ್ದೇಶದಿಂದ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಮೆಸ್ಕಾಂ ಉಪವಿಭಾಗ ಕಚೇರಿಗಳಲ್ಲಿ ಅ.14, 15, ಮತ್ತು 16 ರಂದು ಸೇವಾ ಸೇತು ಶಿಬಿರಗಳು ನಡೆಯಲಿವೆ.

ಈ ಶಿಬಿರಗಳ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಯೋಜನೆಯ ಕುರಿತು ಅರಿವು ಮೂಡಿಸುವುದು ಹಾಗೂ ಮೇಲ್ಛಾವಣಿ ಸೌರ ವಿದ್ಯುತ್ ವ್ಯವಸ್ಥೆ ಅಳವಡಿಸಿಕೊಳ್ಳಲು ಅಗತ್ಯವಿರುವ ನೋಂದಣಿ ಪ್ರಕ್ರಿಯೆ, ಬ್ಯಾಂಕ್ ಸಾಲ ಸೌಲಭ್ಯಗಳನ್ನು ಪಡೆಯುವ ಕುರಿತು ಮಾರ್ಗದರ್ಶನ ಮತ್ತು ಸೌರ ವಿದ್ಯುತ್ ಘಟಕಗಳ ಅಳವಡಿಕೆಗಾಗಿ ಅಧಿಕೃತ ಮಾರಾಟಗಾರರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಸಹಾಯ ಒದಗಿಸುವುದಾಗಿದೆ.

ಆಸಕ್ತ ಸಾರ್ವಜನಿಕರು ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿರುವ ಮೆಸ್ಕಾಂ ಉಪವಿಭಾಗ ಕಚೇರಿಗಳಿಗೆ ತಮ್ಮ ವಿದ್ಯುತ್ ಬಿಲ್‌ನ ಪ್ರತಿ ಹಾಗೂ ಆಧಾರ್ ಕಾರ್ಡ್‌ನೊಂದಿಗೆ ಭೇಟಿ ನೀಡಿ, ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article