ಸಾಹಿತಿ ಭುವನೇಶ್ವರಿ ಹೆಗಡೆಯವರಿಗೆ ಕಲ್ಕೂರ ಪ್ರತಿಷ್ಠಾನದಿಂದ  ‘ಜೀವಮಾನ ಸಾಧನಾ ಪ್ರಶಸ್ತಿ’ ಪ್ರದಾನ

ಸಾಹಿತಿ ಭುವನೇಶ್ವರಿ ಹೆಗಡೆಯವರಿಗೆ ಕಲ್ಕೂರ ಪ್ರತಿಷ್ಠಾನದಿಂದ ‘ಜೀವಮಾನ ಸಾಧನಾ ಪ್ರಶಸ್ತಿ’ ಪ್ರದಾನ


ಮಂಗಳೂರು: ನಾಡಿನ ಖ್ಯಾತ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಅವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿರುವ ಅನುಪಮವಾದ ಸೇವೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಕಲ್ಕೂರ ಪ್ರತಿಷ್ಠಾನದಿಂದ ‘ಜೀವಮಾನ ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ನಡೆದಾಡುವ ವಿಶ್ವಕೋಶ ಎಂದೇ ಪ್ರಸಿದ್ಧರಾಗಿದ್ದ ಡಾ. ಕೆ. ಶಿವರಾಮ ಕಾರಂತರ ಹುಟ್ಟು ಹಬ್ಬ ಸಮಾರಂಭದಲ್ಲಿ ಕಾರ್ಯಕ್ರಮ ಸಂಯೋಜಿಸಿದ್ದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅವರು ಸಾಹಿತಿ ಭುವನೇಶ್ವರಿ ಹೆಗಡೆಯವರನ್ನು ಅಭಿನಂದಿಸಿದರು.

ಹಿರಿಯ ಸಾಹಿತಿ ಪ್ರೊ. ಬಿ.ಎ. ವಿವೇಕ ರೈ, ಕಾರಂತ ಪ್ರಶಸ್ತಿ ಪುರಸ್ಕೃತ ಖ್ಯಾತ ಲೇಖಕಿ ವೈದೇಹಿ, ಮಂಗಳೂರು ವಿಶ್ವವಿದ್ಯಾಲಯದ ಪಕುಲಪತಿ ಪ್ರೊ. ಪಿ.ಎಲ್. ಧರ್ಮ, ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಭುವನೇಶ್ವರಿ ಹೆಗಡೆಯವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಹಿರಿಯ ಲೇಖಕ ಎಚ್. ಶಾಂತರಾಜ ಐತಾಳ್, ಪ್ರೊ. ಜಿ.ಕೆ. ಭಟ್ ಸೇರಾಜೆ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article