ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್ಟಿಗೆ ಹಕ್ಕೊತ್ತಾಯ ಮಂಡಿಸಿದರೆ ಮಾತ್ರ ಬೇಡಿಕೆ ಈಡೇರಲು ಸಾಧ್ಯ: ಸಂಸದ ಚೌಟ

ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್ಟಿಗೆ ಹಕ್ಕೊತ್ತಾಯ ಮಂಡಿಸಿದರೆ ಮಾತ್ರ ಬೇಡಿಕೆ ಈಡೇರಲು ಸಾಧ್ಯ: ಸಂಸದ ಚೌಟ


ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅತ್ಯಂತ ಅವಶ್ಯವಾಗಿದ್ದು, ಕರಾವಳಿಯ ಜನಪ್ರತಿನಿಧಿಗಳು, ವಕೀಲರು ಮತ್ತು ನಾಗರಿಕರು ಒಗ್ಗಟ್ಟು ಮೆರೆದು ಪ್ರಬಲ ಹಕ್ಕೊತ್ತಾಯ ಮಂಡಿಸಿದರೆ ಮಾತ್ರ ಈ ಬೇಡಿಕೆ ಈಡೇರಲು ಸಾಧ್ಯ ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಅವರು ಶನಿವಾರ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪನೆ ಕುರಿತು ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಮಂಗಳೂರು ರಾಜ್ಯದ ಪ್ರಮುಖ ನಗರ. ಇಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅರ್ಹ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಮುಂದೆ ತಾಲೂಕು ಮಟ್ಟದಲ್ಲೂ ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಸಾರ್ವಜನಿಕರಿಂದ ಹೈಕೋರ್ಟ್ ಪೀಠದ ಅಗತ್ಯತೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುವುದು. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ನಗರಕ್ಕೆ  ಮತ್ತಷ್ಟು ಮಹತ್ವ ಸಿಗಲಿದೆ. ಜಿಲ್ಲೆಯ ಅಭಿವೃದ್ಧಿಗೂ ಇದು ಪೂರಕವಾಗಲಿದೆ ಎಂದರು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ ಶೇಣವ ಮಾತನಾಡಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಆಗುವುದರಿಂದ ಜನಸಾಮಾನ್ಯರಿಗೆ ಪ್ರಯೋಜನವಾಗಲಿದೆ

ವಕೀಲರಿಗೆ ಸೀಮಿತವಾಗಿದ್ದ ಹೋರಾಟ ಸಾರ್ವಜನಿಕ  ಬೇಡಿಕೆಯಾಗಿ ಇಂದು ಸಭೆ ನಡೆಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಪ್ರತಿಯೊಬ್ಬರ ಬೇಡಿಕೆಯಾಗಿದ್ದು, ಇದರ ಅವಶ್ಯಕತೆ ಬಗ್ಗೆ ದಾಖಲೆ ಸಹಿತ ಸರ್ಕಾರಕ್ಕೆ ಮನವರಿಕೆ ಮಾಡುವುದು ಅಗತ್ಯವಾಗಿದೆ ಎಂದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಅವರು ಹೈಕೋರ್ಟ್ ಪೀಠ ಸ್ಥಾಪನೆ ಸಂಬಂಧಿಸಿದ ನಡೆದ ಹೋರಾಟದ ಇದುವರೆಗಿನ ಬೆಳವಣಿಗೆಯನ್ನು ವಿವರಿಸಿದರು.

ಹಿರಿಯ ವಕೀಲ ಎಂ.ಪಿ. ನೊರೊನ್ಹಾ ಅವರು ಪೀಠ ಸ್ಥಾಪನೆ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಲು ಹಂತಹಂತವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಭಿಪ್ರಾಯ ತಿಳಿಸಿದರು.

ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹಿಂ. ಮಾಜಿ ಎಂಎಲ್ಸಿ ಮೋನಪ್ಪ ಭಂಡಾರಿ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಕೆನರಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ದಿವಾಕರ ಕೊಚ್ಚಿಕರ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಐಎಂಎ ಪ್ರತಿನಿಧಿ ಡಾ.ಅಣ್ಣಯ್ಯ ಕುಲಾಲ್, ಲಯನ್ಸ್ ಕ್ಲಬ್ ಪ್ರತಿನಿಧಿ ವಿನೋದ್ ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅಭಿಪ್ರಾಯ ಮಂಡಿಸಿದರು. 

ವಕೀಲರಾದ ಶ್ರೀಧರ ಶೆಟ್ಟಿ ಪುಳಿಂಚ ವಂದಿಸಿದರು. ಜಗದೀಶ್ ಕೆ.ಆರ್. ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article