ಬೆಳೆವಿಮೆ: ರೈತರಿಗೆ ನ್ಯಾಯಯುತ ಪರಿಹಾರಕ್ಕೆ ಜಿಲ್ಲಾ ಕೃಷಿಕ ಸಮಾಜ ಒತ್ತಾಯ
ಬೆಳೆ ವಿಮಾ ಪರಿಹಾರ ಮತ್ತು ಪಾವತಿಯಲ್ಲಿ ತಾರತಮ್ಯ ಆಗಿದ್ದು ಅನೇಕ ರೈತರಿಗೆ ಕಡಿಮೆ ಪರಿಹಾರ ಪಾವತಿಯಾಗಿರುವ ಬಗ್ಗೆ ಚರ್ಚೆ ನಡೆಸಲಾಯಿತು. ಅವರಿಗೆ ತಕ್ಷಣ ನ್ಯಾಯಯುತ ಪರಿಹಾರವನ್ನು ನೀಡುವಂತೆ ಸರಕಾರವನ್ನು ಒತ್ತಾಯ ಮಾಡುವ ಬಗ್ಗೆ ನಿರ್ಣಯಿಸಲಾಯಿತು. ಮುಂದಿನ ವರ್ಷದ ಹೊಸ ಟರ್ಮ್ ಶೀಟನ್ನು ತಯಾರು ಮಾಡುವ ಸಂದರ್ಭದಲ್ಲಿ ಈಗಿರುವ ಸಮಸ್ಯೆಗಳನ್ನು ಹರಿಸುವುದರ ಜೊತೆಗೆ ಕೃಷಿಕರ ಬೇಡಿಕೆಯನ್ನು ಪರಿಗಣಿಸಬೇಕೆಂದು ಹಾಗೂ ತಾಂತ್ರಿಕ ಮತ್ತು ಭೌಗೋಳಿಕ ಮಾಹಿತಿಗಳ ಬೇಡಿಕೆ ಪಟ್ಟಿಯನ್ನು ರಾಜ್ಯ ಕೃಷಿಕ ಸಮಾಜದ ಮೂಲಕ ರಾಜ್ಯ ಸರಕಾರಕ್ಕೆ ಸಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ತೋಟಗಾರಿಕಾ ಇಲಾಖೆಯಿಂದ ಸಬ್ಸಿಡಿಯಲ್ಲಿ ಸಿಗುವ ಸೋಲಾರ್ ಪಂಪ್ ಸೆಟ್‌ಗಳನ್ನು ಪ್ರತಿ ತಾಲೂಕಿಗೆ ಕನಿಷ್ಠ 10 ಘಟಕಗಳನ್ನು ನೀಡುವ ಬಗ್ಗೆ ಸರಕಾರಕ್ಕೆ ಆಗ್ರಹಿಸಲಾಯಿತು. ಬರಪೀಡಿತ ತಾಲೂಕಿನಲ್ಲಿ ಭತ್ತ ಬೆಳೆಯುವ ರೈತರಿಗೆ ಪ್ರತಿ ಹೆಕ್ಟರಿಗೆ 8500 ರೂ.ಗಳ ಸಹಾಯಧನವನ್ನು ನೀಡುವ ಬಗ್ಗೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿ ರೈತರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕು ಕೃಷಿ ಇಲಾಖೆಯಲ್ಲಿ ಸಬ್ಸಿಡಿ ದರದಲ್ಲಿ ಪಿವಿಸಿ ಪೈಪ್‌ಗಳನ್ನು ವಿತರಿಸಲಾಗುತ್ತಿದ್ದು, ರೈತರು ತಮ್ಮ ತಾಲೂಕು ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಕೃಷಿ ವಿಜ್ಞಾನ ಕೇಂದ್ರದಿಂದ ಅಣಬೆ ಕೃಷಿ ಮಾಡಲು ಪ್ರೋತ್ಸಾಹ ನೀಡುತ್ತಿದ್ದು, ತರಬೇತಿ ಹಾಗೂ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಮಾಡಿಕೊಡಲಾಗುವುದು ಎಂದು ತಿಳಿಸಿದರು. ಸಣ್ಣ ನೀರಾವರಿ ಇಲಾಖೆಯಿಂದ ತಯಾರಿಸಿದ ಆಣೆಕಟ್ಟುಗಳ ಸಮರ್ಪಕ ನಿರ್ವಹಣೆ ಬಗ್ಗೆ ಸರ್ಕಾರವು ಗಮನಹರಿಸಬೇಕೆಂದು ಬರೆದುಕೊಳ್ಳಲಾಯಿತು.
ರಾಜ್ಯ ಪ್ರತಿನಿಧಿ ಪದ್ಮನಾಭ ರೈ, ಕಾರ್ಯದರ್ಶಿ ರಾಕೇಶ್ ರೈ ಕೇಡೆಂಜಿ, ಕೋಶಾಧಿಕಾರಿ ಕುಸುಮಾಧರ ಸುಳ್ಯ, ಸಂಜೀವ ಮಟದೂರು, ದೇವದಾಸ್ ಭಂಡಾರಿ ಉಳ್ಳಾಲ, ರಾಜು ಪೂಜಾರಿ ಬೆಳ್ತಂಗಡಿ, ಮಹಾವೀರ ಜೈನ್ ಬೆಳ್ತಂಗಡಿ, ಮಹೇಶ್ ಕೆ. ಸವಣೂರು, ಪದ್ಮರಾಜ ಬಲಾಲ್ ಬಂಟ್ವಾಳ, ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಸಂತ ಕುಮಾರ್ ಶೆಟ್ಟಿ, ರೇಷ್ಮೆ ಸಹಾಯಕ ನಿರ್ದೇಶಕಿ ಶಾಂಭವಿ, ಸಹಾಯಕ ತೋಟಗಾರಿಕಾ ಅಧಿಕಾರಿ ದರ್ಶನ್ ಜಿ, ಕೆ.ವಿ.ಕೆ ಮುಖ್ಯಸ್ಥ ಡಾ. ಜಿ.ಟಿ. ರಮೇಶ್, ಕೆ.ವಿ.ಕೆ ವಿಜ್ಞಾನಿ ಡಾ. ಹರೀಶ್ ಉಪಸ್ಥಿತರಿದ್ದರು.
ಜಂಟಿ ಕೃಷಿ ನಿರ್ದೇಶಕ ಡಾ. ಹೊನ್ನಪ್ಪ ಗೋವಿಂದ ಗೌಡ ವಂದಿಸಿದರು.