ಮಂಗಳೂರು ರಥಬೀದಿ ಕಾಲೇಜಿನಲ್ಲಿ ವಿ.ವಿ. ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟಕ್ಕೆ ಚಾಲನೆ
ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಅವರು ಮಾತನಾಡಿ, ಚೆಸ್ ಪಂದ್ಯಾಟವು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ತಾಳ್ಮೆ, ಬುದ್ಧಿವಂತಿಕೆ ಹಾಗೂ ತಂತ್ರಗಾರಿಕೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥೆ ಡಾ. ಅಪರ್ಣ ಆಳ್ವ, ಮತ್ತಿತರರು ಉಪಸ್ಥಿತರಿದ್ದರು.
ಧನ್ಯ ಅವರು ಪ್ರಾರ್ಥನೆ ಸಲ್ಲಿಸಿದರು. ಐಕ್ಯೂಎಸಿ ವಿಭಾಗದ ಸಹ ಸಂಚಾಲಕಿ ಡಾ. ಜ್ಯೋತಿಪ್ರಿಯ ಸ್ವಾಗತಿಸಿದರು. ಇತಿಹಾಸ ವಿಭಾಗ ಮುಖ್ಯಸ್ಥೆ ಡಾ. ಜ್ಯೋತಿ ಪಿ ವಂದಿಸಿದರು.
ಕಾಲೇಜಿನ ಕ್ರೀಡಾ ಕಾರ್ಯದರ್ಶಿಗಳಾದ ಸಾತ್ವಿಕ್ ಮತ್ತು ಶಾಲಿನಿ ಅವರು ಕಾರ್ಯಕ್ರಮದ ಆಯೋಜನೆಯಲ್ಲಿ ಸಹಕರಿಸಿದರು. ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ಪರ್ಧಿಗಳು ತಮ್ಮ ಚದುರಂಗದ ಕೌಶಲ್ಯವನ್ನು ಪ್ರದರ್ಶಿಸಿದರು.
ಈ ಕಾಲೇಜಿನಲ್ಲಿ ಸತತವಾಗಿ ನಾಲ್ಕನೇ ಬಾರಿಗೆ ಪಂದ್ಯಾಟ ಆಯೋಜಿಸಲ್ಪಟ್ಟಿದ್ದು, ಮಂಗಳೂರು ವಿವಿ ವ್ಯಾಪ್ತಿಯ 12 ಕಾಲೇಜುಗಳ ಪುರುಷ ಮತ್ತು ಮಹಿಳಾ ಚೆಸ್ ತಂಡಗಳು ಭಾಗವಹಿಸಿದ್ದು, ಸಮಗ್ರ ಪ್ರಥಮ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು., ದ್ವಿತೀಯ ಸ್ಥಾನವನ್ನು ಅತಿಥೇಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು., ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ತೃತೀಯ ಸ್ಥಾನವನ್ನು ಹಾಗೂ ನಾಲ್ಕನೇ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಪಡೆದುಕೊಂಡಿತು.
ಈ ಪಂದ್ಯಾಟವು ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ಪರಸ್ಪರ ಸಹಕಾರ ಹಾಗೂ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವಲ್ಲಿ ಸಹಕಾರಿಯಾಯಿತು.
