ಜನನ-ಮರಣ ಪ್ರಮಾಣ ಪತ್ರ ಆಂದೋಲನ
Tuesday, October 13, 2026
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಬಾಕಿ ಉಳಿದಿರುವ ಜನನ-ಮರಣ ಪ್ರಮಾಣ ಪತ್ರಗಳನ್ನು ವಿತರಿಸಲು ಅ.14ರಿಂದ 17ರವರೆಗೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.
ಈ ಅವಧಿಯಲ್ಲಿ http://slotbooking.karnatakasmartcityinನಲ್ಲಿ ಬುಕ್ ಮಾಡಿಕೊಂಡು ಬಾಕಿ ಉಳಿದಿರುವ ಅರ್ಜಿಗಳಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಸಲ್ಲಿಸಿ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಬಹುದು ಎಂದು ಮನಪಾ ಉಪ ಆಯುಕ್ತ (ಆಡಳಿತ)ರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.