ಅಂತರ ಕಾಲೇಜು ಕುಸ್ತಿ: ಬೆಸೆಂಟ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

ಅಂತರ ಕಾಲೇಜು ಕುಸ್ತಿ: ಬೆಸೆಂಟ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ


ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಸೆಪ್ಟೆಂಬರ್ 23 ಮತ್ತು 24 ರಂದು ಸುರತ್ಕಲ್‌ನ ಗೋವಿಂದದಾಸ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕುಸ್ತಿ ಸ್ಪರ್ಧೆಯಲ್ಲಿ ಬೆಸೆಂಟ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ತೂಕ ವಿಭಾಗಗಳಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.


ಕಾಲೇಜಿನಿಂದ ಒಟ್ಟು 10 ವಿದ್ಯಾರ್ಥಿನಿಯರು ವಿವಿಧ ತೂಕ ವಿಭಾಗಗಳಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅವರಲ್ಲಿ ನಾಲ್ವರು ವಿದ್ಯಾರ್ಥಿನಿಯರು ಪದಕಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

55 ಕೆ.ಜಿ. ತೂಕ ವಿಭಾಗದಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿನಿ ಸಿಂಚನ ಎಸ್. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ. ವಿದ್ಯಾರ್ಥಿನಿ ಮಹಾಲಕ್ಷ್ಮಿ ತೃತೀಯ ಸ್ಥಾನ ಪಡೆದರು.

57 ಕೆ.ಜಿ. ತೂಕ ವಿಭಾಗದಲ್ಲಿ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಎಂ. ಅಂಬಿಕಾ  ತೃತೀಯ ಸ್ಥಾನ. 65 ಕೆ.ಜಿ. ತೂಕ ವಿಭಾಗದಲ್ಲಿ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಕದೀಜತ್ ಅಮೀರಾ ತೃತೀಯ ಸ್ಥಾನ ಪಡೆದರು.

ಈ ಸಾಧನೆಯೊಂದಿಗೆ ಬೆಸೆಂಟ್ ಮಹಿಳಾ ಕಾಲೇಜು ಒಟ್ಟಾರೆ 4ನೇ ಚಾಂಪಿಯನ್‌ಶಿಪ್ ಸ್ಥಾನವನ್ನು ಪಡೆದುಕೊಂಡಿದೆ.

ವಿದ್ಯಾರ್ಥಿನಿಯರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಡಾ. ರೂಪತಿ ಎಂ., ಈಶ್ವರ ದಡ್ಡಲ್ಕಾಡು ಹಾಗೂ ದಿವ್ಯಾ ಪೂಜಾರಿ ಅವರು ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು. ಅವರ ಸಮರ್ಪಿತ ತರಬೇತಿ ಹಾಗೂ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ಉತ್ತಮ ಪ್ರದರ್ಶನ ನೀಡಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಆಡಳಿತ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಕ್ರೀಡಾ ಚಟುವಟಿಕೆಗಳಲ್ಲಿಯೂ ಹೆಚ್ಚಿನ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article