ಡಿಜಿಟಲ್ ತಂತ್ರಜ್ಞಾನದಿಂದ ಸವಾಲುಗಳ ಸೃಷ್ಠಿ: ಪ್ರೊ. ಎ. ಸಿದ್ದಿಕ್
ಅವರು ಸೆ.29 ರಂದು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಮಂಗಳೂರಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಬ್ಯಾಂಕ್ ಆಫ್ ಬರೋಡಾ ಸಹಯೋಗದಲ್ಲಿ ಬ್ಯಾಂಕಿಂಗ್ ಅರಿವು ಮತ್ತು ಸೈಬರ್ ಸುರಕ್ಷತೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರೊ. ರಾಮಕೃಷ್ಣ ಬಿ.ಎಂ., ಬ್ಯಾಂಕಿಂಗ್ ಉದ್ಯಮದ ಆರ್ಥಿಕ ಶಕ್ತಿ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಬ್ಯಾಂಕುಗಳ ಪಾತ್ರವನ್ನು ವಿವರಿಸಿದರು.
ಬ್ಯಾಂಕ್ ಆಫ್ ಬರೋಡಾದ ಆರ್. ರುಕ್ಮಣಿ, ವಿಕಾಸ್ ಸಿಂಗ್ ರಘವಂಶಿ, ಡಾ. ಪಿ. ಬಾಲಮುರಗನ್ ಹಾಗೂ ಲಲ್ಜಿ ಸಾಹು ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರಸ್ತುತ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಎದುರಾಗುತ್ತಿರುವ ಸೈಬರ್ ಸುರಕ್ಷತಾ ಸಮಸ್ಯೆಗಳು, ಆನ್‌ಲೈನ್ ವಂಚನೆಗಳು, ಡಿಜಿಟಲ್ ಬ್ಯಾಂಕಿಂಗ್‌ನಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಗಳು ಹಾಗೂ ಸುರಕ್ಷಿತ ಡಿಜಿಟಲ್ ವ್ಯವಹಾರಗಳ ಕುರಿತು ಮಾಹಿತಿ ನೀಡಿದರು.
ಇದೇ ವೇಳೆ, ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮತ್ತು ಸೈಬರ್ ಸುರಕ್ಷತೆಗೆ ಸಂಬಂಧಿಸಿದ ರಸಪ್ರಶ್ನೆ ಕಾರ್ಯಕ್ರಮ ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವೀಣಾ ನಿರ್ವಹಿಸಿದರು. ಐಶ್ವರ್ಯ ಸಿ. ಭಂಡಾರಿ ಸ್ವಾಗತಿಸಿದರು. ಪ್ರತೀಕ್ಷಾ ಆರ್. ಕಾಮತ್ ವಂದಿಸಿದರು.