ಶಿಕ್ಷಣದ ಜೊತೆಗೆ ರಾಜಕೀಯ ಜ್ಞಾನ ಬೆಳೆಸಿಕೊಳ್ಳಿ: ಪ್ರೊ. ಪಿ.ಎಲ್. ಧರ್ಮ
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ಉದ್ಘಾಟಿಸಿ ಮಾತನಾಡಿದರು. ನಾಯಕನಾದವನು ಯಾವಾಗಲೂ ಇಡೀ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕೇ ಹೊರತು, ವಿಭಜನೆ ಮಾಡಬಾರದು. ಹಾಗೆ ಮಾಡಿದರೆ ಆತ ನಾಯಕನಾಗುವ ಅರ್ಹತೆಯನ್ನು ಕಳೆದಕೊಳ್ಳುತ್ತಾನೆ. ಸಮಾಜದಲ್ಲಿ ಮನುಷ್ಯ ಮನುಷ್ಯನ ನಡುವೆ ಯಾವುದೇ ಘ?ಣೆಗೆ ಎಡೆ ಮಾಡಿಕೊಡಬಾರದು. ಬದುಕಿನಲ್ಲಿ ದೊಡ್ಡ ಕನಸನ್ನು ಕಂಡು ಅದನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಪರಿಶ್ರಮ ಪಡಬೇಕು. ವಿದ್ಯಾರ್ಥಿಗಳು ತಮ್ಮ ಆಲೋಚನೆಯಲ್ಲಿ ವೈವಿಧ್ಯತೆಯನ್ನು ಬೆಳಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ನೆರವಾಗಬೇಕಿದೆ. ಸರ್ಕಾರದ ಯೋಜನೆಗಳನ್ನು ದುರುಪಯೋಗ ಪಡಿಸಿಕೊಳ್ಳದೇ ಸನ್ಮಾರ್ಗದಲ್ಲಿ ನಡೆಯುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಶಾಖೆಯ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ, ವಿದ್ಯಾರ್ಥಿ ಪರಿಷತ್ ಬದುಕಿಗೆ ಉತ್ತಮ ಬುನಾದಿ ಹಾಕಿಕೊಡುತ್ತದೆ. ಭವಿಷ್ಯದಲ್ಲಿ ವಿದ್ಯಾರ್ಥಿಗಳು ಸಂಪತ್ತಿನಲ್ಲಿ ಸರಳತೆ, ಅಧಿಕಾರದಲ್ಲಿ ಸೌಮ್ಯತೆ ಹಾಗೂ ಕೋಪದಲ್ಲಿ ಮೌನವನ್ನು ಅಳವಡಿಸಿಕೊಳ್ಳಬೇಕಿದೆ. ಸರಳ ಸ್ವಭಾವವೇ ನಿಜವಾದ ನಾಯಕತ್ವದ ಗುಣ. ಮನುಷ್ಯನ ಪ್ರವೃತ್ತಿ ಆತನಿಗೆ ಮರ್ಯಾದೆ ತಂದುಕೊಡುವಂತಾಗಬೇಕು. ನಾಯಕತ್ವದ ಜೊತೆಗೆ ಶಿಕ್ಷಣ ಹಾಗೂ ಉತ್ತಮ ಆರೋಗ್ಯದ ಕಡೆಗೂ ಗಮನ ನೀಡಬೇಕಿದೆ. ಬದುಕಿನಲ್ಲಿ ಪರಿಶ್ರಮವಿಲ್ಲದೇ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು. ಮಾನವೀಯತೆ ಯಾವುದೇ ಜಾತಿ, ಧರ್ಮ, ಮತವೆಂದು ಭೇದ ಮಾಡುವುದಿಲ್ಲ. ಎಲ್ಲಾ ಅನುಭವಗಳ ಕಣಜವೇ ಸರ್ಕಾರಿ ಕಾಲೇಜುಗಳಾಗಿರುವುದರಿಂದ ವ್ಯಕ್ತಿಯ ನಿಜವಾದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಲೇಜಿನ ಹಳೆ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಅವರನ್ನು ಅನುಸರಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಿದೆ. ನಿಮ್ಮದೇ ಆಸಕ್ತಿಗಳನ್ನು ಬೆನ್ನಟ್ಟಿಕೊಂಡು ಪರಿಶ್ರಮದಿಂದ ಸಮಾಜಕ್ಕೆ ಮಾದರಿಯಾಗಬೇಕಿದೆ. ಬದುಕಿನ ಎಲ್ಲಾ ಏಳು-ಬೀಳುಗಳಲ್ಲೂ ಸಮಚಿತ್ತದಿಂದ ಮುಂದೆ ಸಾಗಬೇಕು. ಆ ಮೂಲಕ ಕಾಲೇಜಿನ ಪ್ರತಿಷ್ಠೆ, ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.
ವಿದ್ಯಾರ್ಥಿ ಪರಿಷತ್ತಿನ ಉಪನಿರ್ದೇಶಕ ಪ್ರೊ. ರಾಮಕೃಷ್ಣ ಬಿ.ಎಂ. ಹಾಗೂ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೆ, ವಿದ್ಯಾರ್ಥಿ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲಾ ಪ್ರತಿನಿಧಿಗಳಿಗೆ ಪ್ರಾಂಶುಪಾಲರು ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಸೇರಿದಂತೆ ನಾನಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.