ನೀರಮಾರ್ಗದಲ್ಲಿ ಬಿಜೆಪಿ ಹಕ್ಕೊತ್ತಾಯ ಸಭೆ: ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ: ಶಾಸಕ ಭರತ್ ಶೆಟ್ಟಿ ಆಕ್ರೋಶ
ರಾಜ್ಯ ಸರ್ಕಾರ ಜನರಿಗೆ ನಿರಂತರವಾಗಿ ಸುಳ್ಳು ಭರವಸೆಗಳನ್ನು ನೀಡುತ್ತಾ ಬಂದಿದೆ. ಮಂಗಳೂರಿಗೆ 32,000 ಕೋಟಿ ರೂ. ಅನುದಾನ ನೀಡುವ ಕುರಿತು ನೀಡಿದ್ದ ಭರವಸೆಯ ಬಗ್ಗೆಯೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
ಜನರ ನಿರೀಕ್ಷೆಗಳನ್ನು ಈಡೇರಿಸಲು ಸಾಧ್ಯವಾಗದ ಸರ್ಕಾರದ ಆಡಳಿತ ವೈಖರಿಯನ್ನು ಪ್ರಶ್ನಿಸಿದ ಅವರು, ಈ ಸರ್ಕಾರಕ್ಕೆ 30 ರೂ. ನೀಡುವ ಯೋಗ್ಯತೆ ಇಲ್ಲದ ಕುರಿತು ಸರಕಾರದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಜನರ ಹಕ್ಕುಗಳನ್ನು ರಕ್ಷಿಸಲು ಮತ್ತು ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್ ಜಯಾನಂದ ಅಂಚನ್, ಮಾಜಿ ಪಂಚಾಯತ್ ಅಧ್ಯಕ್ಷೆ ಕಸ್ತೂರಿ, ಶಕ್ತಿ ಕೇಂದ್ರ ಪ್ರಮುಖ್ ಯಶ್ವಿತ್ ಕುಂದರ್ ಸೇರಿದಂತೆ ಪಕ್ಷದ ಹಿರಿಯರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
