ಕುಡಿಯುವ ನೀರು ಯೋಜನೆಗಳ ಗುರಿ ಸಾಧನೆಗೆ ಸಿಇಒ ಸೂಚನೆ

ಕುಡಿಯುವ ನೀರು ಯೋಜನೆಗಳ ಗುರಿ ಸಾಧನೆಗೆ ಸಿಇಒ ಸೂಚನೆ


ಮಂಗಳೂರು: ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಯೋಜನೆಗಳ ಬಾಕಿ ಇರುವ ಕಾರ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಜಿಲ್ಲೆಯ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಗಳ ಅನುಷ್ಠಾನ ಹಾಗೂ ವಿವಿಧ ಯೋಜನೆಗಳಡಿ ನಿಗದಿತ ಗುರಿಗಳನ್ನು ಕಾಲಮಿತಿಯೊಳಗೆ ಸಾಧಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ನರ್ವಾಡೆ ವಿನಾಯಕ್ ಕಾರ್ಭಾರಿ ಸೂಚಿಸಿದ್ದಾರೆ.

ಅವರು ಮಂಗಳವಾರ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸುಜಲ್ ಗಾಂವ್ ಐಡಿ ಸ್ಥಿತಿಗತಿ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ (MVS) ಹಾಗೂ ಏಕಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ (SVS) ಅನುಷ್ಠಾನ, ಹರ್ ಘರ್ ಜಲ್ ಪ್ರಗತಿ, ಟಾಸ್ಕ್ ಫೊರ್ಸ್ ಕಾರ್ಯಚಟುವಟಿಕೆಗಳ ಪ್ರಗತಿ ಹಾಗೂ ಡಬ್ಲ್ಯೂ.ಪಿ.ಪಿ  ಪ್ರಗತಿ, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಯ ಪ್ರಗತಿ,  ಹಾಗೂ ಇತರೆ ಯೋಜನೆಗಳ ಕುರಿತು ಪ್ರಗತಿಯನ್ನು ಪರಿಶೀಲಿಸಿದರು. ಯೋಜನೆಗಳ ಅನುಷ್ಠಾನದಲ್ಲಿ ನಿಗದಿತ ಗುರಿಗಳನ್ನು ಸಾಧಿಸಲು ಆದ್ಯತೆ ನೀಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ಬಾಕಿ ಇರುವ ಕಾರ್ಯಗಳನ್ನು ಗುರುತಿಸಿ, ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಮುಂಬರುವ ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಗುರುತಿಸಿ, ಅಗತ್ಯವಿರುವ ಕಡೆಗಳಲ್ಲಿ ಕೊಳವೆಬಾವಿ ಸೇರಿದಂತೆ ಪರ್ಯಾಯ ನೀರಿನ ಮೂಲಗಳ ಅವಶ್ಯಕತೆಯನ್ನು ಪರಿಶೀಲಿಸಿ, ಮುಂಚಿತವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಕಾರ್ಯಪಾಲಕ ಅಭಿಯಂತರ  ಜೈಪ್ರಕಾಶ್, ವಿವಿಧ ಇಲಾಖಾಧಿಕಾರಿಗಳು ಮತ್ತಿತ್ತರರು ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article