ಗಾಂಧೀಜಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಗಾಂಧೀಜಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ


ಮಂಗಳೂರು: ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಭಾವಚಿತ್ರಕ್ಕೆ ಪುಷ್ಪನಮನ ವನ್ನು ಸಲ್ಲಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಮಚಂದ್ರ ಭಟ್ ಅವರು ಮಹಾತ್ಮ ಗಾಂಧೀಜಿಯವರ ಬದುಕಿನಲ್ಲಿ ಸತ್ಯ, ಅಹಿಂಸೆ, ಸರಳತೆ ಹಾಗೂ ಸ್ವಚ್ಛತೆಯ ಆದರ್ಶಗಳು ಇಂದಿನ ಯುವಜನತೆಗೆ ಸದಾ ಮಾರ್ಗದರ್ಶಕವಾಗಿವೆ ಎಂದು ತಿಳಿಸಿದರು.

ಉತ್ತಮ ಸಮಾಜದ ನಿರ್ಮಾಣದಲ್ಲಿ ಇಂದಿನ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದದ್ದು ಹಾಗಾಗೀ ಗಾಂಧೀಜಿಯವರ ಜೀವನ ಮತ್ತು ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳ ಜೀವನ, ಪ್ರಾಮಾಣಿಕತೆ, ದೇಶಭಕ್ತಿ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.

ಕಾರ್ಯಕ್ರಮದ ಸಂಯೋಜಕರಾದ ಜೀವಶಾಸ್ತ್ರ ವಿಭಾಗದ ರಶ್ಮಿ ಹೆಚ್ ಅವರು ಉಪಸ್ಥಿತರಿದ್ಧರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಆದರ್ಶಗಳನ್ನು ಸ್ಮರಿಸಿ ಗೌರವ ಸಲ್ಲಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು, ಸ್ವಚ್ಛತೆ, ಸತ್ಯನಿಷ್ಠೆ ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ಬೆಳೆಸುವ ಸಂದೇಶವನ್ನು ನೀಡಿತು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article