ಮಹಾತ್ಮಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ

ಮಹಾತ್ಮಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ


ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯಲ್ಲಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಭಾರತ ದೇಶ ಕಂಡ ಹೆಮ್ಮೆಯ ಮಹಾನ್ ನಾಯಕರಾದ ಮಹಾತ್ಮಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಿಸಲಾಯಿತು. 


ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಸುರೇಖಾ ಆರ್. ಭಟ್ ದೀಪವನ್ನು ಬೆಳಗಿಸಿ ಮಹಾತ್ಮಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಂತರ ಮಾತನಾಡಿದ ಇವರು ಇಂದು ಮಕ್ಕಳೆಲ್ಲರೂ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ದೇಶಕ್ಕಾಗಿ ಉಪವಾಸವನ್ನು ಕೈಗೊಂಡು ಪ್ರಜೆಗಳಿಗೆ ಮಾದರಿಯಾದ ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತಿನಂತೆ ಜಗತ್ತಿಗೆ ಪರಿಚಿತರು ಲಾಲ್ ಬಹದ್ದೂರ್ ಶಾಸ್ತ್ರಿಗಳಾದರೆ, ಅಹಿಂಸೆ, ಸತ್ಯಗಳ ಅಸ್ತ್ರಗಳನ್ನು ಹಿಡಿದು ಭಾರತಕ್ಕೆ ಸ್ವತಂತ್ರ್ಯ ತಂದುಕೊಟ್ಟ ನಾಯಕರು ಮಹಾತ್ಮಗಾಂಧೀಜಿಯವರು ಇಂದು ನಮ್ಮ ಮಕ್ಕಳು ಶಾಲೆಗಳಲ್ಲಿ ಇಂತಹ ಮಹಾನ್ ನಾಯಕರ ತತ್ವಗಳನ್ನು ಓದುವ ಮೂಲಕ ಅಹಿಂಸೆಯ ಕಡೆ ವಾಲಬೇಕು. ಅವರ ಆದರ್ಶಗಳನ್ನು ನಾವು ಜೀವನದಲ್ಲಿ ರೂಢಿಸಿಕೊಳ್ಳುವ ಮೂಲಕ ಅವರ ತ್ಯಾಗ ಬಲಿದಾನಗಳಿಗೆ ಗೌರವ ಸೂಚಿಸೋಣ ಎಂದು ತಿಳಿಸಿದರು.


ಸಂದರ್ಭದಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿ ಮತ್ತು ಶಿಕ್ಷಕರು ಸೇರಿಕೊಂಡು ಸರ್ವಧರ್ಮ ಪ್ರಾರ್ಥನೆಯನ್ನು ನೆರವೇರಿಸಿಕೊಟ್ಟರು. ಶಿಕ್ಷಕ ಶರಣಪ್ಪ ಮತ್ತು ಭಾಸ್ಕರ್ ಅವರು ಗಾಂಧೀಜಿ ಮತ್ತು ಶಾಸ್ತ್ರೀಯವರ ಕುರಿತಾದ ರಸಪ್ರಶ್ನೆ ಸ್ಪರ್ಧೆಯನ್ನು ಮಕ್ಕಳಿಗಾಗಿ ಆಯೋಜಿಸಿದ್ದರು.


ನಂತರ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮಹಾತ್ಮಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.


ಈ ಸಂದರ್ಭದಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಶಿಕ್ಷಕರಾದ ಶರಣಪ್ಪ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article