ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಆಯುಧ ಪೂಜೆ

ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಆಯುಧ ಪೂಜೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ  ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ನಲ್ಲಿ  ಆಯುಧ ಪೂಜಾ ಕಾರ್ಯಕ್ರಮ ಸೋಮವಾರ ಶ್ರದ್ಧಾಭಕ್ತಿಯಿಂದ  ಆಚರಿಸಲಾಯಿತು.

ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.  ರಾಜೇಂದ್ರ ಕುಮಾರ್ ಅವರು ಆಯುಧ  ಪೂಜಾ  ಕಾರ್ಯಕ್ರಮದಲ್ಲಿ ಭಾಗವಹಿಸಿ  ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬ್ಯಾಂಕಿನ ವಾಹನಗಳು, ಯಂತ್ರೋಪಕರಣಗಳುಹಾಗೂ ಕಚೇರಿಯ ಉಪಕರಣಗಳಿಗೆ ಪೂಜೆ  ಸಲ್ಲಿಸಿ, ಬ್ಯಾಂಕಿನ  ಅಭಿವೃದ್ಧಿ ಮತ್ತು ಪ್ರಗತಿಗಾಗಿ ಪ್ರಾರ್ಥಿಸಲಾಯಿತು.

ನಬಾರ್ಡ್ ಸಿಜಿಎಂ ಸಂಗೀತಾ ಕರ್ತಾ, ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ,  ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮೇಘರಾಜ್ ಜೈನ್, ಬ್ಯಾಂಕ್  ನಿರ್ದೇಶಕರುಗಳಾದ  ಶಶಿಕುಮಾರ್ ರೈ ಬಾಲ್ಯೋಟ್ಟು, ಜೈರಾಜ್ ಬಿ.ರೈ , ರಾಜೇಶ್ ರಾವ್, ಸದಾಶಿವ ಉಳ್ಳಾಲ್ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಸುನೀಲ್ ಕುಮಾರ್ ಹೊಳ್ಳ ಉದ್ಯಮಿಗಳಾದ  ಇನಾಯತ್ ಅಲಿ, ಜಯಪ್ರಕಾಶ್ ತುಂಬೆ ಹಾಗೂ ಬ್ಯಾಂಕ್ ಅಧಿಕಾರಿಗಳು , ಸಿಬ್ಬಂದಿಗಳು  ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article