ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಶ್ಮಿತಾಗೆ ಪ್ರಥಮ ಸ್ಥಾನ
Monday, October 19, 2026
ಮಂಗಳೂರು: ಮೂಡುಬಿದಿರೆ ಧವಳ ಕಾಲೇಜಿನಲ್ಲಿ ಅಕ್ಟೋಬರ್ 17 ಮತ್ತು 18 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ 68 ಕೆಜಿ ವಿಭಾಗದಲ್ಲಿ ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಒಟ್ಟಾರೆ ಚಾಂಪಿಯನ್‌ಶಿಪ್‌ನಲ್ಲಿ ೪ನೇ ಸ್ಥಾನವನ್ನು ಗಳಿಸಿದೆ.