ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು: ಬಂಧನ, ಸರ ವಶಕ್ಕೆ

ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು: ಬಂಧನ, ಸರ ವಶಕ್ಕೆ

ಮಂಗಳೂರು: ಮದುವೆ ಸಮಾರಂಭದಲ್ಲಿ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಮಹಿಳೆ ಕಳ್ಳತನ ಮಾಡಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದು, ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಮಹಿಳೆಯನ್ನು ಉಳ್ಳಾಲದ ಕೋಟೆಪುರದ ನಿವಾಸಿ ಮಿನ್ನತ್ (42) ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರ:

ಅ.18 ರಂದು ಮಂಗಳೂರಿನ ಕೊಡಿಯಾಲ್ ಬೈಲ್‌ನಲ್ಲಿರುವ ಟಿ.ಎಂ.ಎ. ಪೈ ಹಾಲ್‌ನಲ್ಲಿ ನಡೆದ ವಿವಾಹ ಸಮಾರಂಭದ ಸಂದರ್ಭದಲ್ಲಿ ಶೀಮಾಬಾನು ಅವರ ಪುತ್ರಿ ಮಧ್ಯಾಹ್ನ 3 ವರ್ಷ 6 ತಿಂಗಳ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಅಪರಿಚಿತ ಮಹಿಳೆಯೊಬ್ಬರು ಎಳೆದುಕೊಂಡು ಕಳವು ಮಾಡಿಕೊಂಡು ಹೋಗಿದ್ದು, ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಹಿಳೆಯನ್ನು ಅ.19 ರಂದು ಬಂಧಿಸಿದ್ದು, ಆಕೆಯಿಂದ ಕಳವಾದ ಚಿನ್ನದ ಸರದೊಂದಿಗೆ ಪೆಂಡೆಂಟ್ ಹೊಂದಿದ್ದು, ಸುಮಾರು 10 ಗ್ರಾಂ ತೂಕದ ಸರವನ್ನು ವಶಪಡಿಸಿಕೊಳ್ಳಾಗಿದೆ. ಇದರ ಅಂದಾಜು ಮೌಲ್ಯ 1,35,000 ರೂ. ಆಗಿರುತ್ತದೆ.

ಆರೋಪಿತೆಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 3 ಕಳವು ಪ್ರಕರಣ ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಒಟ್ಟು 5 ಕಳವು ಪ್ರಕರಣಗಳು ಸೇರಿ ಒಟ್ಟು 9 ಪ್ರಕರಣಗಳು ದಾಖಲಾಗಿ ನ್ಯಾಯಾಲಯದ ವಿಚಾರಣೆಯಲ್ಲಿರುತ್ತದೆ. ಈಕೆಯು ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದರಿಂದ ಹೊಸ ಭಾರತೀಯ ನ್ಯಾಯ ಸಂಹಿತೆಯಲ್ಲಿ ಕಲಂ 112 ಸಂಘಟಿತ ಅಪರಾಧ ಸೇರಿಸಿ ತನಿಖೆ ಕೈಗೊಳ್ಳಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article