ಆಳ್ವಾಸ್ ಆರೋಹಣ 2026: ಪ್ರಥಮ ಬ್ಯಾಚಿನ ಎಂಬಿಬಿಎಸ್ ವಿದ್ಯಾರ್ಥಿಗಳ ಸ್ವಾಗತ ಕಾಯ೯ಕ್ರಮ ಹಾಗೂ ಶ್ವೇತವಸ್ತ್ರಧಾರಣಾ ಸಮಾರಂಭ
ಸಾವಿರ ಮೈಲುಗಳ ಪ್ರಯಾಣವೂ ಮೊದಲ ದಿಟ್ಟ ಹೆಜ್ಜೆಯಿಂದ ಆರಂಭವಾಗುತ್ತದೆ. ನೀವು ಇಂದು ಆ ಹೆಜ್ಜೆಯನ್ನಿಟ್ಟಿದ್ದೀರಿ. ಈ ಪ್ರಯಾಣವನ್ನು ಶಿಸ್ತು, ಸಮರ್ಪಣೆ ಮತ್ತು ಬದ್ಧತೆಯಿಂದ ಪೂರ್ಣಗೊಳಿಸುವ ಜವಾಬ್ದಾರಿ ನಿಮ್ಮ ಮೇಲಿದೆ.
ಭಾರತೀಯ ವೈದ್ಯರು ಜಾಗತಿಕ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡುತ್ತಿದ್ದು, ಬ್ರಿಟನ್‌ನ ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಸೇರಿದಂತೆ ವಿದೇಶಗಳ ಆರೋಗ್ಯ ವ್ಯವಸ್ಥೆಯಲ್ಲಿ ಭಾರತೀಯ ವೈದ್ಯರ ಕೊಡುಗೆಯನ್ನು ಶ್ಲಾಘಿಸಿದರು.
ವೈದ್ಯಕೀಯ ಶಿಕ್ಷಣದ ಮೊದಲ ವರ್ಷದ ಮಹತ್ವವನ್ನು ವಿವರಿಸಿದ ಅವರು ಮೂಲ ವಿಷಯಗಳ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಶಿಕ್ಷಕರು ಶಿಫಾರಸು ಮಾಡುವ ಪ್ರಮಾಣಿತ ಪಠ್ಯಪುಸ್ತಕಗಳನ್ನು ಓದಬೇಕು. ತರಗತಿ ಹಾಗೂ ಪ್ರಯೋಗಾಲಯದ ಅಭ್ಯಾಸಗಳನ್ನು ತಪ್ಪಿಸಬಾರದು ಮತ್ತು ಪ್ರಾಯೋಗಿಕ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಮಗ್ರ ಬೋಧನೆ ಮತ್ತು ಸಮಸ್ಯೆ ಆಧಾರಿತ ಕಲಿಕೆ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ರೋಗಗಳನ್ನು ಅರ್ಥಮಾಡಿಕೊಳ್ಳುವ ಹಾಗೂ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡುವ ಸಾಮರ್ಥ್ಯವನ್ನು ಬೆಳೆಸುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಕರ್ನಾಟಕದಲ್ಲಿ ಒಟ್ಟು 72 ವೈದ್ಯಕೀಯ ಕಾಲೇಜುಗಳಿದ್ದು, ಹೊಸದಾಗಿ ಆರಂಭಗೊಂಡಿರುವ ಆಳ್ವಾಸ್ ವೈದ್ಯಕೀಯ ಕಾಲೇಜಿನಲ್ಲಿ ಮೊದಲ ಶೈಕ್ಷಣಿಕ ವರ್ಷದಲ್ಲೇ 150 ಎಂಬಿಬಿಎಸ್ ಸೀಟುಗಳ ಪೈಕಿ 146 ಸೀಟುಗಳು ಈಗಾಗಲೇ ಭರ್ತಿಯಾಗಿದ್ದು, ಮುಂದಿನ ಸುತ್ತಿನಲ್ಲಿ ಉಳಿದ ನಾಲ್ಕು ಸೀಟಗಳು ಭರ್ತಿಯಾಗಲಿವೆ ಎಂದರು.
ವೈದ್ಯಕೀಯ ಶಿಕ್ಷಣದಲ್ಲಿ ಶೈಕ್ಷಣಿಕ ಗುಣಮಟ್ಟ ಸಾಧಿಸಲು ಸಂಸ್ಥೆಯ ಆಡಳಿತ ಮಂಡಳಿ, ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ವೈದ್ಯಕೀಯ ಕ್ಷೇತ್ರವು ಮಾನವ ಜೀವಕ್ಕೆ ಸಂಬಂಧಿಸಿದ ಸೂಕ್ಷ್ಮ ಕ್ಷೇತ್ರವಾಗಿರುವುದರಿಂದ ಪ್ರತಿಯೊಂದು ಕಾರ್ಯವನ್ನೂ ಅತ್ಯಂತ ಜಾಗರೂಕತೆ, ಕಾಳಜಿ ಮತ್ತು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಎಲ್ಲಾ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಶ್ವೇತವಸ್ತ್ರಧಾರಣೆ (ವೈಟ್ ಕೋಟ್) ಕಾರ್ಯಕ್ರಮ ನಡೆಯಿತು.
ಆಳ್ವಾಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮಹಾಬಲ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ. ಕೃಷ್ಣ ಉಣ್ಣಿ ಹಾಗೂ ಡಾ. ಅಭಿಜ್ಞಾ ಬಲ್ಲಾಳ್ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ಪಿ. ಹರೀಶ್ ನಾಯಕ್ ವಂದಿಸಿದರು.
ನಂತರ ನಡೆದ ಅಧಿವೇಶನಗಳಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ‘ಆಳ್ವಾಸ್‌ನಲ್ಲಿನ ಜೀವನಾನುಭವ’ದ ಕುರಿತು ಮಾತನಾಡಿದರೆ, ಡಾ. ವಿನಯ್ ಆಳ್ವ ವಿದ್ಯಾರ್ಥಿ ಜೀವನದಲ್ಲಿ ಜೀವನಮೌಲ್ಯಗಳು, ಶಿಸ್ತು, ವೃತ್ತಿಪರತೆ ಹಾಗೂ ಜವಾಬ್ದಾರಿಯುತ ಮನೋಭಾವವನ್ನು ಬೆಳೆಸಿಕೊಳ್ಳುವ ಅಗತ್ಯವನ್ನು ತಿಳಿಸಿದರು.
