ಅ.7 ರಂದು ಮೂಡುಬಿದಿರೆಯಲ್ಲಿ ನಾಗರಿಕರಿಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
Monday, October 5, 2026
ಮೂಡುಬಿದಿರೆ: ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಮಂಗಳೂರು ತಾಲೂಕು ಪಂಚಾಯತ್ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗಾಗಿ ವಿಶೇಷ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವು ಅ. 7ರಂದು ಪೂರ್ವಾಹ್ನ 10.30 ಕ್ಕೆ ಆಡಳಿತ ಕಛೇರಿಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಪುರಸ್ಕೃತ ಅಟಲ್ ವಯೋ ಅಭ್ಯುದಯ ಯೋಜನೆಯ ಉಪ ಯೋಜನೆಯಾದ 'ಹಿರಿಯ ನಾಗರಿಕರ ರಾಜ್ಯ ಕ್ರಿಯಾ ಯೋಜನೆ (2026-27)' ರ ಅಡಿಯಲ್ಲಿ ಈ ತಾಲೂಕು ಮಟ್ಟದ ಕಾರ್ಯಕ್ರಮ ನಡೆಯಲಿದೆ.
ತಾಲೂಕಿನ ಹಿರಿಯ ನಾಗರಿಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಾನೂನು ನೆರವು ಹಾಗೂ ಇಲಾಖೆಯ ಸೌಲಭ್ಯಗಳ ಮಾಹಿತಿ ಪಡೆದುಕೊಳ್ಳಬೇಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮಂಗಳೂರು ತಾಲೂಕು ಸಂಯೋಜಕರಾದ (MRW) ಜಯಪ್ರಕಾಶ್ (ಮೊಬೈಲ್: 9110897458) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.