ಅಂತರ್ ಪಾಲಿಟೆಕ್ನಿಕ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ: ಎಸ್.ಎನ್. ಪಾಲಿಟೆಕ್ನಿಕ್ ತಂಡ ರನ್ನರ್ ಅಪ್
Saturday, October 17, 2026
ಮೂಡುಬಿದಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ತಾಂತ್ರಿಕ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅಂತರ್ ಪಾಲಿಟೆಕ್ನಿಕ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮೂಡುಬಿದಿರೆಯ ಎಸ್.ಎನ್. ಪಾಲಿಟೆಕ್ನಿಕ್ ತಂಡವು ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ತಂಡಕ್ಕೆ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಭಾಸ್ಕರ ಪಾಲಡ್ಕ ತರಬೇತಿ ನೀಡಿದ್ದಾರೆ.