ಎಕ್ಸಲೆಂಟ್ನಲ್ಲಿ ‘ಬಿಸಿನೆಸ್ ಐಕಾನ್’ ಸಂವಾದ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಎಲೈಟ್ ಕನ್ಸಲ್ಟೆಂಟ್ & ಡೆವಲಪರ್ಸ್ನ ಮಾಲಕ ಡೆನಿಸ್ ಪಿರೇರಾ ಅವರು ಮಾತನಾಡಿ, ಅವಕಾಶಗಳ ಸದ್ಬಳಕೆ ಮತ್ತು ನಿರಂತರ ಪರಿಶ್ರಮವು ವ್ಯಾವಹಾರಿಕ ಬೆಳವಣಿಗೆಗೆ ಅತ್ಯಗತ್ಯ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಡಿಜಿಟಲ್ ಮಾರ್ಕೆಟಿಂಗ್ನ ಸಮರ್ಥ ಬಳಕೆಯು ಉದ್ಯಮದ ಪ್ರಗತಿಗೆ ಪೂರಕವಾಗುತ್ತದೆ ಎಂದು ತಿಳಿಸಿದರು.
ಭಾರತೀಯ ಜೀವ ವಿಮಾ ನಿಗಮದ (LIC) ಏಜೆಂಟ್ ಚಂದ್ರಹಾಸ ದೇವಾಡಿಗ ಅವರು ಮಾತನಾಡಿ, ವೃತ್ತಿಯಲ್ಲಿನ ಬದ್ಧತೆ, ಪ್ರಾಮಾಣಿಕತೆ ಹಾಗೂ ಗ್ರಾಹಕರ ವಿಶ್ವಾಸವು ವಿಮಾ ವ್ಯವಹಾರದಲ್ಲಿ ಯಶಸ್ಸು ಸಾಧಿಸಲು ಪ್ರಮುಖ ಅಂಶಗಳಾಗಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಮಾತನಾಡಿ, ಸಂವಹನ ಕೌಶಲ ಮತ್ತು ಅನುಭವಿಗಳ ಮಾರ್ಗದರ್ಶನವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಭವಿಷ್ಯದ ಸಾಧನೆಗೆ ಪೂರಕವಾಗಿವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ ಹಾಗೂ ಉಪನ್ಯಾಸಕರಾದ ಸಂಧ್ಯಾ ಮತ್ತು ಅಶೋಕ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ರಶ್ಮಿತಾ ಶೆಟ್ಟಿ ಮತ್ತು ತನು ಆರ್. ಅವರು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿಕೊಟ್ಟರು. ವಿದ್ಯಾರ್ಥಿನಿ ಸಾಗರಿಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.