"ದಿ ರೆಸಿಲಿಯೆಂಟ್ ವುಮನ್: ಮ್ಯಾನೇಜಿಂಗ್ ಸ್ಟ್ರೆಸ್" ವಿಶೇಷ ಉಪನ್ಯಾಸ

"ದಿ ರೆಸಿಲಿಯೆಂಟ್ ವುಮನ್: ಮ್ಯಾನೇಜಿಂಗ್ ಸ್ಟ್ರೆಸ್" ವಿಶೇಷ ಉಪನ್ಯಾಸ


ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾನಸಿಕ ರೋಗ ಹಾಗೂ ಮನೋವಿಜ್ಞಾನ ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನದ ಪೂರ್ವಭಾವಿಯಾಗಿ “ದಿ ರೆಸಿಲಿಯೆಂಟ್ ವುಮನ್: ಮ್ಯಾನೇಜಿಂಗ್ ಸ್ಟ್ರೆಸ್” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಆಳ್ವಾಸ್ ಆಯುರ್ವೇದ ಕಾಲೇಜಿನ ವೈದ್ಯಕೀಯ ಅಧೀಕ್ಷಕಿ ಡಾ. ಸುರೇಖಾ ಪೈ ಮಾತನಾಡಿ ಇಂದಿನ ವೇಗದ ಜೀವನಶೈಲಿಯಲ್ಲಿ ಮಹಿಳೆಯರು ಕುಟುಂಬ, ಉದ್ಯೋಗ, ಮಕ್ಕಳ ಆರೈಕೆ ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಒಳಗೊಂಡಂತೆ ಹಲವು ಪಾತ್ರಗಳನ್ನು ಏಕಕಾಲದಲ್ಲಿ ನಿರ್ವಹಿಸಬೇಕಾಗುತ್ತದೆ. ಈ ಬಹುಮುಖ ಜವಾಬ್ದಾರಿಗಳ ನಡುವೆ ಉಂಟಾಗುವ ಒತ್ತಡವು ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಮಾನಸಿಕ ಒತ್ತಡವನ್ನು ಸಮರ್ಥವಾಗಿ ನಿರ್ವಹಿಸುವುದು ಮಹಿಳೆಯರ ವೈಯಕ್ತಿಕ ಆರೋಗ್ಯಕ್ಕೆ ಮಾತ್ರವಲ್ಲದೆ, ಅವರ ಮಕ್ಕಳ ಮತ್ತು ಕುಟುಂಬದ ಒಟ್ಟಾರೆ ಕ್ಷೇಮಕ್ಕೂ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಸುಶೀಲ್ ಶೆಟ್ಟಿ  ಮಾತನಾಡಿ, ಮಾನಸಿಕ ಆರೋಗ್ಯವು ಸಮಗ್ರ ಆರೋಗ್ಯದ ಅವಿಭಾಜ್ಯ ಅಂಗವಾಗಿದೆ. ದೈನಂದಿನ ಜೀವನದಲ್ಲಿ ಮಹಿಳೆಯರು ನಿರ್ವಹಿಸುವ ವಿವಿಧ ಪಾತ್ರಗಳು ಮತ್ತು ಜವಾಬ್ದಾರಿಗಳನ್ನು ಗುರುತಿಸುವುದರ ಜೊತೆಗೆ, ಅವರ ಮಾನಸಿಕ ಕ್ಷೇಮಕ್ಕೂ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.

ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಮಾನಸಿಕ ರೋಗ ಮತ್ತು ಮನೋವಿಜ್ಞಾನ ವಿಭಾಗದ ವತಿಯಿಂದ ಮಾನಸಿಕ ಒತ್ತಡಕ್ಕೆ ಸಂಬಂಧಿಸಿದ ಚಿಕಿತ್ಸಾ ಸೇವೆಗಳಿಗೆ ಶೇ. 25ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಈ ಸೌಲಭ್ಯವು ಅಕ್ಟೋಬರ್ 9ರಿಂದ ನವೆಂಬರ್ 8ರವರೆಗೆ ಲಭ್ಯವಿರಲಿದೆ.  ವಿಭಾಗದ ವತಿಯಿಂದ ನಿರಂತರವಾಗಿ ನಡೆಸಲಾಗುತ್ತಿರುವ ಕೌನ್ಸೆಲಿಂಗ್ ಮತ್ತು ಇತರ ಮಾನಸಿಕ ಆರೋಗ್ಯ ಸೇವೆಗಳನ್ನು ಅಗತ್ಯವಿರುವವರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಮಾನಸಿಕ ರೋಗ ಮತ್ತು ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ರವಿಪ್ರಸಾದ್ ಹೆಗ್ಡೆ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಅರ್ಚಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಅರುಣ್ ಎಂ. ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article