ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ
Saturday, October 17, 2026
ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ ಮಂದಿರ ಬಳಿಯ ನಿವಾಸಿ ಶೇಖರ ಪೂಜಾರಿಯವರ ಮನೆಗೆ ಶುಕ್ರವಾರ ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ.
ಘಟನೆಯಿಂದ ಮನೆಯ ವಿದ್ಯುತ್ ಉಪಕರಣಗಳು, ಕರೆಂಟ್ ಮೀಟರ್ ಹಾಗೂ ವಿದ್ಯುತ್ ತಂತಿಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಟಿ.ವಿ.ಗೂ ಹಾನಿಯಾಗಿದೆ. ಮನೆಯ ಗೂಡೆಯೂ ಹುಡಿಯಾಗಿ ಕೆಳಗೆ ಬಿದ್ದಿದೆ.
ಘಟನಾ ಸ್ಥಳಕ್ಕೆ ಅಕ್ರಮ ಸಕ್ರಮ ಸಮಿತಿಯ ಸದಸ್ಯ ವಾಸುದೇವ ನಾಯಕ್ ಪುತ್ತಿಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಶಿಧರ್ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು.
