ವಣ೯ಬೆಟ್ಟುವಿನಲ್ಲಿ ವಿದ್ಯುತ್ ಅವಘಡ: ತಾಯಿ, ಮಗ ಮೃತ್ಯು

ವಣ೯ಬೆಟ್ಟುವಿನಲ್ಲಿ ವಿದ್ಯುತ್ ಅವಘಡ: ತಾಯಿ, ಮಗ ಮೃತ್ಯು


ಮೂಡುಬಿದಿರೆ: ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ವಿದ್ಯುತ್ ಅವಘಢದಿಂದಾಗಿ ತಾಯಿ ಮತ್ತು ಪುತ್ರ ಮೃತಪಟ್ಟ ಘಟನೆ ನಡೆದಿದೆ. 

ಮರ್ಸಿ ಮಸ್ಕರೇನಸ್ (45) ಮತ್ತು ಅವರ ಪುತ್ರ ಶೋನ್ ಮಸ್ಕರೇನಸ್ (18) ಮೃತಪಟ್ಟ ದುದೈ೯ವಿಗಳು. 

ಮೂಡುಬಿದಿರೆ ಹೋಲಿ ರೋಸರಿ ವಿದ್ಯಾರ್ಥಿಯಾಗಿದ್ದ ಶೋನ್ ಮಸ್ಕರೇನಸ್ ಬಟ್ಟೆ ಒಣಗಿಸುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಬಟ್ಟೆ ಒಣಗಿಸಲು ಹಾಕಿದ್ದ ತಂತಿಗೆ ಹೈಟೆನ್ಷನ್ ವಿದ್ಯುತ್ ತಂತಿಯ ಸಂಪರ್ಕ ಉಂಟಾಗಿ ವಿದ್ಯುತ್ ಪ್ರವಹಿಸಿರಬಹುದು ಈ ಸಂದಭ೯ ಮಗನನ್ನು ರಕ್ಷಿಸಲು ತಾಯಿ ಹೋದಾಗ ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಬೆಳಗ್ಗೆ ಸುಮಾರು 7ರಿಂದ 8 ಗಂಟೆಯ ವೇಳೆಗೆ ಬೆಳಕಿಗೆ ಬಂದಿದೆ. ತೋಟದ ಕೆಲಸಕ್ಕೆ ಬಂದ ಕಾರ್ಮಿಕರೊಬ್ಬರು ಸ್ಥಳಕ್ಕೆ ಬಂದಾಗ ಘಟನೆ ಗಮನಕ್ಕೆ ಬಂದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article