ಡಾ. ಶಿರೂರು ಅವರಿಗೆ ಬೇಂದ್ರೆ ರಾಷ್ಟ್ರೀಯ ಸಾಹಿತ್ಯ ರತ್ನ ಪ್ರಶಸ್ತಿಯ ಗೌರವ: ಪ್ರವೀಣ್ ಕನ್ಯಾಳ
Saturday, October 31, 2026
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ದ ರಾ ಬೇಂದ್ರೆ ರಾಷ್ಟ್ರೀಯ ಸಾಹಿತ್ಯ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಅಕ್ಷರದೀಪ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರವೀಣ್ ಕಲ್ಯಾಣ ಅವರು ತಿಳಿಸಿದ್ದಾರೆ.
ಧಾರವಾಡದ ರಂಗಾಯಣದ ರಂಗ ಮನೆಯಲ್ಲಿ ನವಂಬರ್ 15ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.